ಕೊಪ್ಪಳ : ಕೊಪ್ಪಳ ಜಿಲ್ಲೆಯಲ್ಲಿ ಟ್ಯಾಕ್ಟರ್‌ಗೆ ಹಿಂಬದಿಯಿಂದ ಬಂದ ಟ್ಯಾಂಕರ್ ಲಾರಿ ಡಿಕ್ಕಿ ಹೊಡೆದ ಪರಿಣಾಮ ಹುಲಿಗೆಮ್ಮ ದೇವಸ್ಥಾನ (Hiligamma Temple) ಕ್ಕೆ ಹೋಗುತ್ತಿದ್ದ ಭಕ್ತರಲ್ಲಿ 7 ಜನರು ಸಾವನ್ನಪ್ಪಿದ ಹೃದವಿದ್ರಾವಕ ಘಟನೆ ಶುಕ್ರವಾರ ನಡೆದಿದೆ. ಘಟನೆಯಿಂದ ಸ್ಥಳದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದ್ದು, ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.
ಟ್ರ್ಯಾಕ್ಟರ್ ಮತ್ತು ಟ್ಯಾಂಕರ್ ಲಾರಿ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮಗು ಸೇರಿ ಏಳು ಮಂದಿ ಸಾವನ್ನಪ್ಪಿರುವ ದುರ್ಘಟನೆ ಕೊಪ್ಪಳ ಜಿಲ್ಲೆಯ ಮುನಿರಾಬಾದ್ (Munirabad) ಸಮೀಪ ರಾಷ್ಟ್ರೀಯ ಹೆದ್ದಾರಿ 50ರಲ್ಲಿ (National Highway 50) ನಡೆದಿದೆ.
ಪೊಲೀಸ್ ಮಾಹಿತಿ ಪ್ರಕಾರ, ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಮರ್ಲಾಯನಹಳ್ಳಿ ಹಾಗೂ ಬಳ್ಳಾರಿ ಜಿಲ್ಲೆಯ ಸಂಡೂರು ತಾಲೂಕಿನ ಯಶವಂತನಗರ ನಿವಾಸಿಗಳು ಟ್ರ್ಯಾಕ್ಟರ್‌ನಲ್ಲಿ ಕೊಪ್ಪಳದ ಹುಲಿಗೆಮ್ಮ ದೇವಸ್ಥಾನಕ್ಕೆ ತೆರಳುತ್ತಿದ್ದರು.
ಟ್ಯಾಂಕರ್ ಲಾರಿ ಡಿಕ್ಕಿ :
ಈ ವೇಳೆ ಟಿಬಿ ಡ್ಯಾಂ ಎರಡನೇ ಬ್ರಿಜ್ ಮೇಲೆ ಹಿಂದಿನಿಂದ ವೇಗವಾಗಿ ಬಂದ ಟ್ಯಾಂಕರ್ ಲಾರಿ (Tanker Lorry) ಟ್ರ್ಯಾಕ್ಟರ್‌ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ನಿಯಂತ್ರಣ ತಪ್ಪಿದ ಟ್ರ್ಯಾಕ್ಟರ್ ಸೇತುವೆಯಿಂದ ಕೆಳಕ್ಕೆ ಉರುಳಿದ ಪರಿಣಾಮ ಭೀಕರ ದುರಂತ ಸಂಭವಿಸಿದೆ.
ಅಪಘಾತದಲ್ಲಿ ಕೆಂಚಪ್ಪ (35), ಮಹಾಂತೇಶ್ (18), ಭರತ್ (1), ಸವಿತಾ (12), ಮಾರೇಶ್, ಗೌರಮ್ಮ ಹಾಗೂ ಮಂಜಮ್ಮ ಮೃತಪಟ್ಟಿದ್ದಾರೆ ಎಂದು ಗುರುತಿಸಲಾಗಿದೆ. ಮೃತರಲ್ಲಿ ಒಂದೇ ಕುಟುಂಬದ ಹಲವು ಸದಸ್ಯರು ಸೇರಿರುವುದು ನೋವನ್ನು ಮತ್ತಷ್ಟು ಹೆಚ್ಚಿಸಿದೆ.
ಇನ್ನು ಕೆಲವರ ಸ್ಥಿತಿ ಗಂಭೀರ ?
ಘಟನೆಯಲ್ಲಿ ಹತ್ತಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದು, ಕೆಲವರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ. ಗಾಯಾಳುಗಳನ್ನು ಹೊಸಪೇಟೆ (Hosapete) ಹಾಗೂ ಕೊಪ್ಪಳ (Koppal) ದ ವಿವಿಧ ಸರ್ಕಾರಿ ಆಸ್ಪತ್ರೆಗಳಿಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಕೆಲವರನ್ನು ಹೆಚ್ಚಿನ ಚಿಕಿತ್ಸೆಗೆ ಬಳ್ಳಾರಿ ಅಥವಾ ಬೆಂಗಳೂರಿಗೆ ರವಾನಿಸುವ ಸಾಧ್ಯತೆ ಇದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ವಿಜಯನಗರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಾಹ್ನವಿ ಹಾಗೂ ಹೊಸಪೇಟೆ ಡಿವೈಎಸ್‌ಪಿ ಕೆ.ಪಿ. ಮುರಳೀಧರ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಕೊಪ್ಪಳ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಲ್. ಅರಸಿದ್ದಿ ಆಸ್ಪತ್ರೆ ಭೇಟಿ ನೀಡಿ ಗಾಯಾಳುಗಳ ಆರೋಗ್ಯ ವಿಚಾರಿಸಿದರು.
ಇದನ್ನು ಓದಿ : ಭಾರಿ ಗಾಳಿ-ಮಳೆಗೆ ವಿಜಯಪುರದಲ್ಲಿ ಮನೆ ಮೇಲ್ಛಾವಣಿ ಕುಸಿತ: ಒಂದೇ ಕುಟುಂಬದ ನಾಲ್ವರು ದಾರುಣ ಸಾವು.
ಐಜಿಪಿ (IGP) ಡಾ. ಹರ್ಷ ಅವರು ಮಾತನಾಡಿ, ಟ್ರ್ಯಾಕ್ಟರ್‌ನಲ್ಲಿ ಸುಮಾರು 19 ಮಂದಿ ಪ್ರಯಾಣಿಸುತ್ತಿದ್ದರು ಎಂದು ತಿಳಿಸಿದ್ದಾರೆ. ಟ್ಯಾಂಕರ್ ಚಾಲಕನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಲಾಗಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಸಂತಾಪ :
ಈ ದುರ್ಘಟನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಂತಾಪ ಸೂಚಿಸಿದ್ದು, ಮೃತರ ಕುಟುಂಬಗಳಿಗೆ ತಲಾ 5 ಲಕ್ಷ ರೂ. ಪರಿಹಾರ (Compensation) ನೀಡಲಾಗುವುದು ಎಂದು ಜಿಲ್ಲಾಧಿಕಾರಿ ಕವಿತಾ ಎಸ್. ಮನ್ನಿಕೇರಿ ತಿಳಿಸಿದ್ದಾರೆ. ಗಾಯಾಳುಗಳ ಚಿಕಿತ್ಸಾ ವೆಚ್ಚವನ್ನು ಸರ್ಕಾರವೇ ಭರಿಸಲಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.
ಈ ಅಪಘಾತದ ನಂತರ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅತಿವೇಗ ಮತ್ತು ನಿರ್ಲಕ್ಷ್ಯ ಚಾಲನೆ ಕುರಿತು ಸಾರ್ವಜನಿಕ ವಲಯದಲ್ಲಿ ಮತ್ತೆ ಚರ್ಚೆ ಆರಂಭವಾಗಿದೆ. ರಸ್ತೆ ಸುರಕ್ಷತಾ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕೆಂಬ ಒತ್ತಾಯ ಕೇಳಿಬರುತ್ತಿದೆ.
ಟ್ಯಾಂಕರ್ ಲಾರಿ ಡಿಕ್ಕಿಯನ್ನು ಚಾಲಕ ಸ್ವಲ್ಪ ಸಾವಧಾನವಾಗಿ ಮತ್ತು ಮಿತವಾಗಿ ವಾಹನ ಚಾಲನೆ ಮಾಡಿದ್ದರೆ, ಈ 7 ಅಮೂಲ್ಯ ಜೀವಗಳನ್ನು ಉಳಿಸಬಹುದಿತ್ತು ಎಂದು ಸಾರ್ವಜನಿಕರು ಮಾತನಾಡಿಕೊಳ್ಳುತ್ತಿದ್ದಾರೆ.
ಪ್ರಮುಖ ಸುದ್ದಿಗಳ ಸಂಪೂರ್ಣ ಪಟ್ಟಿ ಇಲ್ಲಿದೆ
ಸಂಪಾದಕೀಯ :
- ರಸ್ತೆ ಸುರಕ್ಷತಾ ನಿಯಮಗಳನ್ನು (Road Safety Rules) ಪ್ರತಿಯೊಬ್ಬರೂ ಕಡ್ಡಾಯವಾಗಿ ಪಾಲಿಸಬೇಕು.
- ಅತಿವೇಗದ ಚಾಲನೆ, ನಿರ್ಲಕ್ಷ್ಯ ಹಾಗೂ ಟ್ರಾಫಿಕ್ ನಿಯಮ ಉಲ್ಲಂಘನೆಗಳು ಅನೇಕ ಅಪಘಾತಗಳಿಗೆ ಕಾರಣವಾಗುತ್ತಿವೆ.
- ವಾಹನ ಚಾಲನೆ ಮಾಡುವಾಗ ಸೀಟ್ ಬೆಲ್ಟ್ ಮತ್ತು ಹೆಲ್ಮೆಟ್ ಬಳಸುವುದು ಜೀವ ರಕ್ಷಕ ಕ್ರಮವಾಗಿದೆ.
- ವಾಹನ ಚಾಲಕರು ಎಚ್ಚರಿಕೆಯಿಂದ ಮತ್ತು ಸಂಚಾರ ನಿಯಮಗಳನ್ನು ಗೌರವಿಸುವ ಮನೋಭಾವದಿಂದ ನಡೆದುಕೊಂಡರೆ ಅನೇಕ ಅಮೂಲ್ಯ ಜೀವಗಳನ್ನು ಉಳಿಸಬಹುದು.
Disclaimer: ಈ ಅಪಘಾತದ (ಟ್ಯಾಂಕರ್ ಲಾರಿ ಡಿಕ್ಕಿ) ಸುದ್ದಿ ಪ್ರಾಥಮಿಕ ಪೊಲೀಸ್ ಮಾಹಿತಿ ಮತ್ತು ಸ್ಥಳೀಯ ಮೂಲಗಳ ಆಧಾರದ ಮೇಲೆ ರಚಿಸಲಾಗಿದೆ. ತನಿಖೆ ಮುಂದುವರಿದಿರುವ ಹಿನ್ನೆಲೆಯಲ್ಲಿ ಮುಂದಿನ ದಿನಗಳಲ್ಲಿ ಹೆಚ್ಚಿನ ಮಾಹಿತಿ ಬಹಿರಂಗವಾಗುವ ಸಾಧ್ಯತೆ ಇದೆ.





