ಮಂಡ್ಯ : ಮಹಿಳೆಯರಿಗೆ ಸರ್ಕಾರಿ ಕೆಲಸದ ಸುವರ್ಣಾವಕಾಶ (Golden Opportunity) ಒಂದು ಸಿಕ್ಕಿದ್ದು, ಮಂಡ್ಯ ಮಹಿಳೆಯರು ಇದರ ಸದುಪಯೋಗ ಪಡಿಸಿಕೊಳ್ಳುವ ಕಾಲ ಬಂದಿದೆ. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ಖಾಲಿ ಇರುವ ಅಂಗನವಾಡಿ ಹುದ್ದೆಗಳಿಗೆ ಭರ್ಜರಿ ನೇಮಕಾತಿ ನಡೆಯಲಿದೆ.
ಮಂಡ್ಯ ಜಿಲ್ಲೆಯ ಮಹಿಳೆಯರಿಗೆ ಸರ್ಕಾರಿ ಉದ್ಯೋಗ (Government Job) ಪಡೆಯಲು ಉತ್ತಮ ಅವಕಾಶ ದೊರೆತಿದೆ. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ (Women and Child Development Department) ವತಿಯಿಂದ ಜಿಲ್ಲೆಯ ವಿವಿಧ ತಾಲೂಕುಗಳಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ (Anganawadi Worker) ಹಾಗೂ ಅಂಗನವಾಡಿ ಸಹಾಯಕಿ (Helper) ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.
ಸ್ಥಳೀಯವಾಗಿ ಕೆಲಸ ಮಾಡಲು ಬಯಸುವ ಮಹಿಳೆಯರು ಮತ್ತು ಲಿಂಗತ್ವ ಅಲ್ಪಸಂಖ್ಯಾತ ಮಹಿಳಾ ಅಭ್ಯರ್ಥಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದಾಗಿದೆ. ಗೌರವಧನ ಆಧಾರಿತ (Honorarium Based) ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಲಾಖೆ ಅಧಿಸೂಚನೆ ಹೊರಡಿಸಿದ್ದು, ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ.
ಅಂಗನವಾಡಿ ಕಾರ್ಯಕರ್ತೆ / ಅಂಗನವಾಡಿ ಸಹಾಯಕಿ ಹುದ್ದೆಗಳ ಮಾಹಿತಿ :
300ಕ್ಕೂ ಹೆಚ್ಚು ಹುದ್ದೆಗಳು ಖಾಲಿ :
ಮಂಡ್ಯ ಜಿಲ್ಲೆಯ ದುದ್ದ, ಮಳವಳ್ಳಿ, ನಾಗಮಂಗಲ, ಕೆ.ಆರ್. ಪೇಟೆ, ಶ್ರೀರಂಗಪಟ್ಟಣ ಹಾಗೂ ಮದ್ದೂರು ತಾಲೂಕುಗಳ ಅಂಗನವಾಡಿ ಕೇಂದ್ರಗಳಲ್ಲಿ ನೂರಾರು ಹುದ್ದೆಗಳು ಖಾಲಿ ಇರುವುದಾಗಿ ತಿಳಿಸಲಾಗಿದೆ. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಯೋಜನೆಗಳನ್ನು ಪರಿಣಾಮಕಾರಿಯಾಗಿ ಜಾರಿಗೆ ತರಲು ಈ ನೇಮಕಾತಿ ಪ್ರಕ್ರಿಯೆ ಕೈಗೊಳ್ಳಲಾಗಿದೆ.
ಅರ್ಜಿ ಸಲ್ಲಿಸುವ ವಿಧಾನ :
ಈ ನೇಮಕಾತಿಯು ಸಂಪೂರ್ಣವಾಗಿ ಆಫ್‌ಲೈನ್ (Offline) ಮೂಲಕ ನಡೆಯಲಿದೆ. ಆಸಕ್ತ ಅಭ್ಯರ್ಥಿಗಳು ತಮ್ಮ “ತಾಲೂಕಿನ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ (CDPO) ಕಚೇರಿ”ಗೆ ಭೇಟಿ ನೀಡಿ ಅರ್ಜಿ ನಮೂನೆ ಪಡೆದುಕೊಳ್ಳಬೇಕು.
ಅರ್ಜಿ ನಮೂನೆ ಪಡೆದ ನಂತರ ಅಗತ್ಯ ದಾಖಲೆಗಳೊಂದಿಗೆ ಭರ್ತಿ ಮಾಡಿದ ಅರ್ಜಿಯನ್ನು ನಿಗದಿತ ದಿನಾಂಕದೊಳಗೆ ಅದೇ ಕಚೇರಿಗೆ ಸಲ್ಲಿಸಬೇಕು. ಅರ್ಜಿ ಸಲ್ಲಿಸುವ ಮೊದಲು ಅಧಿಸೂಚನೆಯಲ್ಲಿ ನೀಡಿರುವ ಅರ್ಹತೆ ಹಾಗೂ ನಿಯಮಗಳನ್ನು ಗಮನಿಸುವುದು ಮುಖ್ಯವಾಗಿದೆ.
ವಯೋಮಿತಿ ಮತ್ತು ಅರ್ಹತೆ :
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳ ವಯಸ್ಸು,
- ಕನಿಷ್ಠ ವಯಸ್ಸು : 19 ವರ್ಷ ಮತ್ತು
- ಗರಿಷ್ಠ ವಯಸ್ಸು 35 ವರ್ಷದೊಳಗಿರಬೇಕು.
ಇದನ್ನು ಓದಿ : ಚಿಕ್ಕಬಳ್ಳಾಪುರ DC ಕಚೇರಿಯಲ್ಲಿ 169 ಹುದ್ದೆಗಳ ಭರ್ತಿ; 18 – 50 ವರ್ಷ ವಯಸ್ಸಿನವರಿಗೆ ಅವಕಾಶ.
Note : ಸ್ಥಳೀಯ ನಿವಾಸಿಗಳಿಗೆ ಆದ್ಯತೆ ನೀಡಲಾಗುತ್ತದೆ ಎಂದು ಇಲಾಖೆ ತಿಳಿಸಿದೆ.
ಪ್ರಮುಖ ದಿನಾಂಕಗಳು :
ಇಲ್ಲಿ ಗಮನಿಸಬೇಕಾದ ಅಂಶವೇನೆಂದರೆ, ಕೆಲ ತಾಲೂಕುವಾರ ಅಂತಿಮ ದಿನಾಂಕ ಸರಿಯಾಗಿ ಗಮನಿಸಿ ಭರ್ತಿ ಮಾಡಿದ ನಮೂನೆ ಆಯಾ ಕಚೇರಿಗೆ ಮುಟ್ಟಿಸಿ. ಕೊನೆಯ ದಿನಾಂಕ ಇಂತಿವೆ.
- ದುದ್ದ ಶಿಶು ಅಭಿವೃದ್ಧಿ ಯೋಜನೆ ವ್ಯಾಪ್ತಿಯ ಅರ್ಜಿಗಳ ಕೊನೆಯ ದಿನಾಂಕ : ಜೂನ್ 27, 2026.
- ಮಳವಳ್ಳಿ, ನಾಗಮಂಗಲ, ಕೆ.ಆರ್. ಪೇಟೆ, ಶ್ರೀರಂಗಪಟ್ಟಣ ಹಾಗೂ ಮದ್ದೂರು ವ್ಯಾಪ್ತಿಯ ಅರ್ಜಿಗಳ ಕೊನೆಯ ದಿನಾಂಕ : ಜೂನ್ 29, 2026.
ಹೆಚ್ಚಿನ ಮಾಹಿತಿಗಾಗಿ ಸಂಪರ್ಕ :
ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ತಮ್ಮ ತಾಲೂಕಿನ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಯನ್ನು ಸಂಪರ್ಕಿಸಬಹುದು.
- ಮಳವಳ್ಳಿ : 08231-242004
- ಕೆ.ಆರ್. ಪೇಟೆ : 08230-262627
- ಶ್ರೀರಂಗಪಟ್ಟಣ : 08236-295349
ಮಹಿಳೆಯರಿಗೆ ಉತ್ತಮ ಅವಕಾಶ :
ಸ್ಥಳೀಯ ಮಟ್ಟದಲ್ಲಿ ಕೆಲಸ ಮಾಡಲು ಬಯಸುವ ಮಹಿಳೆಯರಿಗೆ ಈ ನೇಮಕಾತಿ ಉತ್ತಮ ಅವಕಾಶವಾಗಿದೆ. ವಿಶೇಷವಾಗಿ ಗ್ರಾಮೀಣ ಭಾಗದ ಮಹಿಳೆಯರಿಗೆ ಉದ್ಯೋಗದೊಂದಿಗೆ ಸಮಾಜಸೇವೆಯ ಅವಕಾಶವೂ ಇದರಿಂದ ದೊರೆಯಲಿದೆ ಎಂದು ಇಲಾಖೆ ತಿಳಿಸಿದೆ.
ಪ್ರಮುಖ ಸುದ್ದಿಗಳ ಸಂಪೂರ್ಣ ಪಟ್ಟಿ ಇಲ್ಲಿದೆ
Disclaimer: ಈ ಲೇಖನವು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ (CDPO) ಇಲಾಖೆಯಿಂದ ಪ್ರಕಟವಾದ ಮಾಹಿತಿಯ ಆಧಾರದ ಮೇಲೆ ಸಿದ್ಧಪಡಿಸಲಾಗಿದೆ. ಅರ್ಜಿ ಸಲ್ಲಿಸುವ ಮೊದಲು ಅಧಿಕೃತ ಅಧಿಸೂಚನೆ ಮತ್ತು ಸಂಬಂಧಿತ ಕಚೇರಿಯಿಂದ ಸಂಪೂರ್ಣ ಮಾಹಿತಿ ಪರಿಶೀಲಿಸುವುದು ಒಳಿತು.





