ಬೆಂಗಳೂರು: ಸರ್ಕಾರ ಇದೀಗ ಗ್ಯಾರಂಟಿ ಯೋಜನೆಗಳಲ್ಲಿ (Guarantee Schemes) ಒಂದಾದ ‘ಗೃಹಲಕ್ಷ್ಮಿ’ ಯೋಜನೆಯಲ್ಲಿ ಮಹತ್ವದ ಬದಲಾವಣೆಗೆ ಮುಂದಾಗಿದ್ದು, ನೀವು ಒಂದು ವೇಳೆ ಈ ಕೆಲಸ ಮಾಡದಿದ್ದರೆ ನಿಮ್ಮ ಖಾತೆಗೆ ರೂ.2000/- ಜಮಾ ಆಗೋದಿಲ್ಲ. ಕೂಡಲೇ ಈ ಕೆಲಸ ಮಾಡಿ.
ಹೌದು, ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಗ್ಯಾರಂಟಿ ಯೋಜನೆಗಳಲ್ಲಿ (Guarantee Schemes) ಒಂದಾದ ‘ಗೃಹಲಕ್ಷ್ಮಿ’ ಯೋಜನೆ (Gruhalakshmi Scheme) ಯಲ್ಲಿ ಇದೀಗ ಮಹತ್ವದ ಬದಲಾವಣೆ ಮಾಡಲು ಸರ್ಕಾರ ಮುಂದಾಗಿದೆ.
ಮಹಿಳೆಯರ ಖಾತೆಗೆ ಪ್ರತಿ ತಿಂಗಳು ₹2000 ಜಮೆ ಮಾಡಲಾಗುತ್ತಿರುವ ಈ ಯೋಜನೆಯಲ್ಲಿ ಅಕ್ರಮ ತಡೆ ಹಾಗೂ ಅರ್ಹ ಫಲಾನುಭವಿಗಳಿಗೆ ಮಾತ್ರ ಹಣ ತಲುಪುವ ಉದ್ದೇಶದಿಂದ ‘ಒನ್-ಟೈಮ್ ಬಯೋಮೆಟ್ರಿಕ್’ (One-Time Biometric Verification) ವ್ಯವಸ್ಥೆ ಜಾರಿಗೆ ತರಲು ಸರ್ಕಾರ ಸಿದ್ಧತೆ ನಡೆಸಿದೆ.
ರಾಜ್ಯದಲ್ಲಿ 1 ಕೋಟಿ 24 ಲಕ್ಷಕ್ಕೂ ಹೆಚ್ಚು ಮಹಿಳೆಯರು ಗೃಹಲಕ್ಷ್ಮಿ ಯೋಜನೆಯ ಸೌಲಭ್ಯ ಪಡೆಯುತ್ತಿದ್ದಾರೆ. ಆದರೆ ಕೆಲವು ತಾಂತ್ರಿಕ ದೋಷಗಳು, ಅರ್ಹರಲ್ಲದವರ ಖಾತೆಗಳಿಗೆ ಹಣ ಜಮೆ ಆಗಿರುವುದು ಹಾಗೂ ಮೃತಪಟ್ಟ ಮಹಿಳೆಯರ ಬ್ಯಾಂಕ್ ಖಾತೆಗಳಿಗೆ ಸಹ ಹಣ ವರ್ಗಾವಣೆ ಆಗುತ್ತಿರುವ ಪ್ರಕರಣಗಳು ಪತ್ತೆಯಾಗಿರುವ ಹಿನ್ನೆಲೆ ಸರ್ಕಾರ ಯೋಜನೆ ಪರಿಷ್ಕರಣೆಗೆ ಮುಂದಾಗಿದೆ.
ಗೃಹಲಕ್ಷ್ಮಿ ಹಣ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ :
ಹೊಸ ನಿಯಮದ ಪ್ರಕಾರ, ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳು ತಮ್ಮ ಬ್ಯಾಂಕ್ ಖಾತೆ, ಮೊಬೈಲ್ ಸಂಖ್ಯೆ ಮತ್ತು ಬಯೋಮೆಟ್ರಿಕ್ ಮಾಹಿತಿಯನ್ನು ಮರು-ನವೀಕರಣ (Re-Verification) ಮಾಡಿಸಿಕೊಳ್ಳುವುದು ಕಡ್ಡಾಯವಾಗಲಿದೆ.
ಈ ಸುದ್ದಿಯನ್ನು ಓದಿ : ಪ್ರತಿದಿನ ಪಾನ್ ತಿನ್ನುವವರೇ ಎಚ್ಚರ; ಈ ಆರೋಗ್ಯ ಸಮಸ್ಯೆ ಇರುವವರು ದೂರ ಇರಲೇಬೇಕು.
ಈ ಪ್ರಕ್ರಿಯೆ ಪೂರ್ಣಗೊಳಿಸದಿದ್ದರೆ ಮುಂದಿನ ದಿನಗಳಲ್ಲಿ ಗೃಹಲಕ್ಷ್ಮಿ ಹಣ ಖಾತೆಗೆ ಜಮೆಯಾಗದ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ. ಈ ಕುರಿತು ರಾಜ್ಯ ಸರ್ಕಾರ ಶೀಘ್ರದಲ್ಲೇ ಅಧಿಕೃತ ಆದೇಶ ಹೊರಡಿಸುವ ಸಾಧ್ಯತೆ ಇದೆ ಎಂದು ವರದಿಯಾಗಿದೆ.
ನವೀಕರಣ ಮಾಡಿಸಿಕೊಳ್ಳುವುದು ಹೇಗೆ?
- ಫಲಾನುಭವಿಗಳು ತಮ್ಮ ಹತ್ತಿರದ ಬೆಂಗಳೂರು ಒನ್ (Bangalore One) ಅಥವಾ ಕರ್ನಾಟಕ ಒನ್ (Karnataka One) ಕೇಂದ್ರಗಳಿಗೆ ಭೇಟಿ ನೀಡಿ ಬಯೋಮೆಟ್ರಿಕ್ ಹಾಗೂ ಮೊಬೈಲ್ ಸಂಖ್ಯೆ ಮೂಲಕ ಮರು ನೋಂದಣಿ ಮಾಡಿಸಿಕೊಳ್ಳಬಹುದು.
- ಆಧಾರ್ (Aadhaar) ಮತ್ತು ಬ್ಯಾಂಕ್ ಖಾತೆ ವಿವರಗಳನ್ನು ಪರಿಶೀಲಿಸಿ ಖಾತೆಯನ್ನು ಸಕ್ರಿಯಗೊಳಿಸಲಾಗುತ್ತದೆ.
ಸರ್ಕಾರದ ಪರಿಶೀಲನೆ ಏಕೆ?
ಗೃಹಲಕ್ಷ್ಮಿ ಯೋಜನೆಯಡಿ ಕೆಲವು ಮಹಿಳೆಯರು ಮೃತಪಟ್ಟಿದ್ದರೂ ಅವರ ಖಾತೆಗಳಿಗೆ ಹಣ ಜಮೆಯಾಗುತ್ತಿರುವುದು ಸರ್ಕಾರದ ಗಮನಕ್ಕೆ ಬಂದಿದೆ. ಇದರಿಂದ ಕೋಟ್ಯಾಂತರ ರೂಪಾಯಿ ಹಣ ದುರುಪಯೋಗವಾಗುತ್ತಿರುವ ಶಂಕೆ ವ್ಯಕ್ತವಾಗಿದೆ.
ಇದನ್ನು ಓದಿ : ಮಹಿಳೆಯರಿಗೆ ರಾಜ್ಯ ಸರ್ಕಾರದಿಂದ ಗುಡ್ ನ್ಯೂಸ್; ಗೃಹಲಕ್ಷ್ಮೀ 30ನೇ ಕಂತಿನ ಹಣ ಬಿಡುಗಡೆ.
ಪ್ರಾಥಮಿಕ ಅಂದಾಜಿನ ಪ್ರಕಾರ, ಯೋಜನೆಯಲ್ಲಿ ಸುಮಾರು ₹100 ಕೋಟಿ ವ್ಯತ್ಯಾಸ ಕಂಡುಬಂದಿದೆ ಎನ್ನಲಾಗಿದೆ. ಈ ಹಿನ್ನೆಲೆ ಯೋಜನೆಯನ್ನು ಪಾರದರ್ಶಕ (Transparent) ಹಾಗೂ ಪರಿಣಾಮಕಾರಿಯಾಗಿ ನಿರ್ವಹಿಸಲು ಸರ್ಕಾರ ಡೇಟಾ ಪರಿಶೀಲನೆ ಕಾರ್ಯಕ್ಕೆ ಮುಂದಾಗಿದೆ.
ಗೃಹ ಜ್ಯೋತಿ ಯೋಜನೆಯೂ ಪರಿಶೀಲನೆಗೆ :
ಗೃಹಲಕ್ಷ್ಮಿ ಮಾತ್ರವಲ್ಲದೆ ಗೃಹ ಜ್ಯೋತಿ (Gruha Jyothi) ಯೋಜನೆಯ ಫಲಾನುಭವಿಗಳ ಪಟ್ಟಿಯನ್ನೂ ಸರ್ಕಾರ ಮರುಪರಿಶೀಲನೆ ಮಾಡುವ ಸಾಧ್ಯತೆ ಇದೆ. ಸರ್ಕಾರದ ಗುರಿ ಅರ್ಹರಿಗೆ ಮಾತ್ರ ಯೋಜನೆಗಳ ಲಾಭ ತಲುಪುವಂತೆ ಮಾಡುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಮಹಿಳೆಯರಲ್ಲಿ ಆತಂಕ :
ಈ ಹೊಸ ನಿಯಮಗಳ ಸುದ್ದಿ ಹೊರಬಿದ್ದ ನಂತರ ಕೆಲ ಫಲಾನುಭವಿಗಳಲ್ಲಿ ಆತಂಕ ಕೂಡ ವ್ಯಕ್ತವಾಗಿದೆ. ಆದರೆ ಸರ್ಕಾರ ಯಾವುದೇ ಅರ್ಹ ಮಹಿಳೆಯರಿಗೆ ತೊಂದರೆ ಆಗದಂತೆ ಕ್ರಮ ಕೈಗೊಳ್ಳಲಾಗುವುದು ಎಂದು ಸ್ಪಷ್ಟಪಡಿಸಿದೆ.
ಗೃಹಲಕ್ಷ್ಮಿ ಯೋಜನೆ (Gruhalakshmi Scheme) :
- ಕರ್ನಾಟಕ ಸರ್ಕಾರದ ಪ್ರಮುಖ ಗ್ಯಾರಂಟಿ ಯೋಜನೆಗಳಲ್ಲಿ ಒಂದಾಗಿದ್ದು, ಈ ಯೋಜನೆಯಡಿ ಕುಟುಂಬದ ಯಜಮಾನಿಯರಿಗೆ ಪ್ರತಿ ತಿಂಗಳು ₹2000 ಆರ್ಥಿಕ ಸಹಾಯವನ್ನು ನೇರವಾಗಿ ಬ್ಯಾಂಕ್ ಖಾತೆಗೆ ಜಮೆ ಮಾಡಲಾಗುತ್ತದೆ.
- ಮಹಿಳೆಯರ ಆರ್ಥಿಕ ಸ್ವಾವಲಂಬನೆ (Financial Independence) ಹೆಚ್ಚಿಸುವ ಉದ್ದೇಶದಿಂದ ಕಾಂಗ್ರೆಸ್ ಸರ್ಕಾರ ಈ ಯೋಜನೆಯನ್ನು ಜಾರಿಗೆ ತಂದಿದೆ.
- ರಾಜ್ಯದ ಕೋಟ್ಯಂತರ ಮಹಿಳೆಯರು ಈ ಯೋಜನೆಯ ಲಾಭ ಪಡೆಯುತ್ತಿದ್ದು, ಮನೆ ಖರ್ಚು ಮತ್ತು ಕುಟುಂಬದ ಅಗತ್ಯಗಳಿಗೆ ಈ ಹಣ ಸಹಾಯಕವಾಗಿದೆ.
- ಇದೀಗ ಅರ್ಹ ಫಲಾನುಭವಿಗಳಿಗೆ ಮಾತ್ರ ಸೌಲಭ್ಯ ತಲುಪಿಸಲು ಸರ್ಕಾರ ಬಯೋಮೆಟ್ರಿಕ್ ಹಾಗೂ ಮರು-ಪರಿಶೀಲನೆ ಪ್ರಕ್ರಿಯೆ ಆರಂಭಿಸಲು ಮುಂದಾಗಿದೆ.
ಹೆಚ್ಚಿನ ಬ್ರೇಕಿಂಗ್ ನ್ಯೂಸ್‌ಗಳಿಗೆ ಇಲ್ಲಿ ಕ್ಲಿಕ್ ಮಾಡಿ
Disclaimer: ಈ ‘ಗೃಹಲಕ್ಷ್ಮಿ’ ಯೋಜನೆ (Gruhalakshmi Scheme) ಯ ಲೇಖನವು ವಿವಿಧ ಮಾಧ್ಯಮ ವರದಿಗಳು ಮತ್ತು ಲಭ್ಯವಿರುವ ಪ್ರಾಥಮಿಕ ಮಾಹಿತಿಗಳ ಆಧಾರದ ಮೇಲೆ ಸಿದ್ಧಪಡಿಸಲಾಗಿದೆ. ಸರ್ಕಾರದಿಂದ ಅಧಿಕೃತ ಆದೇಶ ಪ್ರಕಟವಾದ ಬಳಿಕ ನಿಯಮಗಳಲ್ಲಿ ಬದಲಾವಣೆ ಸಾಧ್ಯವಾಗಬಹುದು.





