ನೌಕರಿ ಮಾಹಿತಿ : ರಾಜ್ಯ ಪೊಲೀಸ್ ಇಲಾಖೆಯಲ್ಲಿ ಸೇವೆ ಸಲ್ಲಿಸಬೇಕೆಂಬ ಆಸೆ ಹೊಂದಿರುವ ಉದ್ಯೋಗಾಕಾಶಗಳಿಗೆ ಇಲ್ಲಿದೆ ಒಂದು ಶುಭ ಸುದ್ದಿ. ಪೊಲೀಸ್ ಇಲಾಖೆ (KSP) ಯಲ್ಲಿ ಖಾಲಿ ಇರುವ ಸಿವಿಲ್ ಪೊಲೀಸ್ ಕಾನ್ಸ್‌ಟೇಬಲ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು, ಇಂದೇ ಅರ್ಜಿ ಸಲ್ಲಿಸಿ.
ಸರ್ಕಾರಿ ಉದ್ಯೋಗದ ಕನಸು ಕಾಣುತ್ತಿರುವ ಯುವಕ-ಯುವತಿಯರಿಗೆ ಕರ್ನಾಟಕ ಸರ್ಕಾರದಿಂದ ಒಂದು ಒಳ್ಳೆಯ ಅವಕಾಶ ದೊರೆತಿದೆ. ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆ (KSP) ಖಾಲಿ ಇರುವ ಸಿವಿಲ್ ಪೊಲೀಸ್ ಕಾನ್ಸ್‌ಟೇಬಲ್ ಹುದ್ದೆಗಳ ಭರ್ತಿಗೆ ನೇಮಕಾತಿ ಪ್ರಕ್ರಿಯೆ ಆರಂಭಿಸಿದ್ದು, ಒಟ್ಟು 3,395 ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.
ಈ ನೇಮಕಾತಿ ಪ್ರಕ್ರಿಯೆಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ನಡೆಸಲಿದ್ದು, ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಪಿಯುಸಿ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳಿಗೆ ಈ ನೇಮಕಾತಿ ಒಂದು ಸುವರ್ಣಾವಕಾಶ ನೀಡಿದೆ.
ಪೊಲೀಸ್ ಕಾನ್ಸ್‌ಟೇಬಲ್ ಹುದ್ದೆಗಳ ವಿವರ :
ನೇಮಕಾತಿ ಅಧಿಸೂಚನೆಯ ಪ್ರಕಾರ, ಸಿವಿಲ್ ಪೊಲೀಸ್ ಕಾನ್ಸ್‌ಟೇಬಲ್ (Civil Police Constable) ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಹುದ್ದೆಗಳ ವರ್ಗವಾರು ಹಂಚಿಕೆ :
ಒಟ್ಟು 3,395 ಸಿವಿಲ್ ಪೊಲೀಸ್ ಕಾನ್ಸ್‌ಟೇಬಲ್ ಹುದ್ದೆಗಳನ್ನು ವಿವಿಧ ವರ್ಗಗಳಿಗೆ ಹಂಚಿಕೆ ಮಾಡಲಾಗಿದೆ. ನೇರ ನೇಮಕಾತಿ ವಿಭಾಗದಲ್ಲಿ,
- ಪುರುಷ ಅಭ್ಯರ್ಥಿಗಳಿಗೆ 2,266 ಹುದ್ದೆಗಳು ಹಾಗೂ
- ಮಹಿಳಾ ಅಭ್ಯರ್ಥಿಗಳಿಗೆ 755 ಹುದ್ದೆಗಳು ಮೀಸಲಿರಿಸಲಾಗಿದೆ.
- ಸೇವಾನಿರತ ಅಭ್ಯರ್ಥಿಗಳ ಪೈಕಿ ಪುರುಷರಿಗೆ 257 ಹಾಗೂ ಮಹಿಳೆಯರಿಗೆ 82 ಹುದ್ದೆಗಳು ಲಭ್ಯವಿವೆ. ಇದರ ಜೊತೆಗೆ
- ತೃತೀಯ ಲಿಂಗ ಅಭ್ಯರ್ಥಿಗಳಿಗಾಗಿ 35 ಹುದ್ದೆಗಳನ್ನು ಮೀಸಲಿಡಲಾಗಿದೆ.
ವೇತನ ಶ್ರೇಣಿ :
- ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ ರೂ. 37,500 ರಿಂದ ರೂ. 76,100ರವರೆಗೆ ವೇತನ ದೊರೆಯಲಿದೆ.
ವಿದ್ಯಾರ್ಹತೆ :
- ಅಭ್ಯರ್ಥಿಗಳು ಮಾನ್ಯತೆ ಪಡೆದ ಮಂಡಳಿ ಅಥವಾ ಶಿಕ್ಷಣ ಸಂಸ್ಥೆಯಿಂದ ಪಿಯುಸಿ, 12ನೇ ತರಗತಿ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು.
Note : ಇದರ ಜೊತೆಗೆ ಕೆಲವು ನಿರ್ದಿಷ್ಟ ಷರತ್ತುಗಳಡಿ ಐಟಿಐ ಹಾಗೂ ಡಿಪ್ಲೊಮಾ ಅಭ್ಯರ್ಥಿಗಳೂ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ.
ವಯೋಮಿತಿ :
- ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಠ 18 ವರ್ಷ ವಯಸ್ಸು ಹೊಂದಿರಬೇಕು.
- ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ಗರಿಷ್ಠ 33 ವರ್ಷ,
- ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ 35 ವರ್ಷ ವಯೋಮಿತಿ ನಿಗದಿಪಡಿಸಲಾಗಿದೆ.
ಈ ಕ್ರೈಂ ಸುದ್ದಿ ಓದಿ : ಲವ್ ಬ್ರೇಕಪ್; ಕಚೇರಿಯಲ್ಲೇ ಮಾಜಿ ಪ್ರೇಯಸಿಯ ಮೇಲೆ ಮಾರಣಾಂತಿಕ ದಾಳಿ.
Note : ಕೆಲವು ವಿಶೇಷ ವರ್ಗದ ಅಭ್ಯರ್ಥಿಗಳಿಗೆ ವಯೋಮಿತಿಯಲ್ಲಿ ಹೆಚ್ಚುವರಿ ಸಡಿಲಿಕೆ ನೀಡಲಾಗಿದೆ.
ಅರ್ಜಿ ಶುಲ್ಕ :
- ಸಾಮಾನ್ಯ ವರ್ಗ (GM) ಹಾಗೂ ಇತರೆ ಹಿಂದುಳಿದ ವರ್ಗಗಳ (OBC) ಅಭ್ಯರ್ಥಿಗಳು ರೂ.750 ಅರ್ಜಿ ಶುಲ್ಕ ಪಾವತಿಸಬೇಕು.
- ಪರಿಶಿಷ್ಟ ಜಾತಿ (SC), ಪರಿಶಿಷ್ಟ ಪಂಗಡ (ST), ಪ್ರವರ್ಗ-1, ಮಾಜಿ ಸೈನಿಕರು ಹಾಗೂ ತೃತೀಯ ಲಿಂಗ ಅಭ್ಯರ್ಥಿಗಳಿಗೆ ರೂ.500 ಶುಲ್ಕ ನಿಗದಿಪಡಿಸಲಾಗಿದೆ.
ಆಯ್ಕೆ ಪ್ರಕ್ರಿಯೆ :
ಅಭ್ಯರ್ಥಿಗಳ ಆಯ್ಕೆ ಹಲವು ಹಂತಗಳಲ್ಲಿ ನಡೆಯಲಿದ್ದು, ಮೊದಲಿಗೆ
- ಲಿಖಿತ ಪರೀಕ್ಷೆ ನಡೆಸಲಾಗುತ್ತದೆ. ನಂತರ
- ದೈಹಿಕ ಸಹಿಷ್ಣುತೆ ಪರೀಕ್ಷೆ (ET) ಹಾಗೂ
- ದೈಹಿಕ ಪ್ರಮಾಣಿತ ಪರೀಕ್ಷೆ (PST) ನಡೆಸಲಾಗುತ್ತದೆ.
ಈ ಸುದ್ದಿಯನ್ನು ಓದಿ : ರೈಲು ಪ್ರಯಾಣಿಕರಿಗೆ ಪ್ರಮುಖ ಮಾಹಿತಿ: ಈ ರೈಲುಗಳ ಸಂಚಾರದಲ್ಲಿ ಬದಲಾವಣೆ, ಭಾಗಶಃ ರದ್ದು.
ಈ ಹಂತಗಳಲ್ಲಿ ಅರ್ಹತೆ ಪಡೆದ ಅಭ್ಯರ್ಥಿಗಳಿಗೆ ವೈದ್ಯಕೀಯ ಪರೀಕ್ಷೆ ನಡೆಸಿ ಅಂತಿಮ ಆಯ್ಕೆ ಪಟ್ಟಿ ಪ್ರಕಟಿಸಲಾಗುತ್ತದೆ.
ಪ್ರಮುಖ ದಿನಾಂಕಗಳು :
- ಅರ್ಜಿ ಸಲ್ಲಿಕೆ ಆರಂಭೀಕ ದಿನಾಂಕ: ಜೂನ್ 8, 2026.
- ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಜುಲೈ 3, 2026.
- ಶುಲ್ಕ ಪಾವತಿಸಲು ಕೊನೆಯ ದಿನಾಂಕ: ಜುಲೈ 4, 2026.
ಲಿಖಿತ ಪರೀಕ್ಷೆ ಯಾವಾಗ?
ನೇಮಕಾತಿಗಾಗಿ ಲಿಖಿತ ಪರೀಕ್ಷೆಯನ್ನು ಆಗಸ್ಟ್ 2, 2026 ರಂದು ಬೆಳಿಗ್ಗೆ 10.30 ರಿಂದ ಮಧ್ಯಾಹ್ನ 12.00 ಗಂಟೆಯವರೆಗೆ ನಡೆಸಲಾಗುತ್ತದೆ. ಪರೀಕ್ಷೆಯು OMR ಆಧಾರಿತ ಆಫ್‌ಲೈನ್ ವಿಧಾನದಲ್ಲಿ ನಡೆಯಲಿದ್ದು, 100 ಪ್ರಶ್ನೆಗಳಿಗೆ 100 ಅಂಕಗಳಿರುತ್ತವೆ.
ಪ್ರತಿ ತಪ್ಪು ಉತ್ತರಕ್ಕೆ 0.25 ಅಂಕಗಳನ್ನು ಕಡಿತಗೊಳಿಸಲಾಗುತ್ತದೆ. ಪರೀಕ್ಷೆಯಲ್ಲಿ ಕನಿಷ್ಠ 30 ಅಂಕಗಳನ್ನು ಗಳಿಸುವುದು ಕಡ್ಡಾಯವಾಗಿದೆ.
ದೈಹಿಕ ಪರೀಕ್ಷೆಯ ವಿವರ :
ಲಿಖಿತ ಪರೀಕ್ಷೆಯಲ್ಲಿ ಅರ್ಹತೆ ಪಡೆದ ಅಭ್ಯರ್ಥಿಗಳನ್ನು 1:5 ಅನುಪಾತದಲ್ಲಿ ದೈಹಿಕ ಸಹಿಷ್ಣುತೆ ಮತ್ತು ದೇಹದಾರ್ಢ್ಯತೆ ಪರೀಕ್ಷೆಗೆ (PST & ET) ಕರೆಯಲಾಗುತ್ತದೆ.
ಇದನ್ನು ಓದಿ : ಕರ್ನಾಟಕ ಪಂಚಾಯತ್ ರಾಜ್ ಆಯುಕ್ತಾಲಯದಲ್ಲಿ ನೇಮಕಾತಿ.
ಪುರುಷ ಅಭ್ಯರ್ಥಿಗಳು ಕನಿಷ್ಠ 168 ಸೆಂ.ಮೀ ಹಾಗೂ ಮಹಿಳಾ ಅಭ್ಯರ್ಥಿಗಳು 157 ಸೆಂ.ಮೀ ಎತ್ತರ ಹೊಂದಿರಬೇಕು. ಪುರುಷರಿಗೆ 1600 ಮೀಟರ್ ಓಟ ಹಾಗೂ ಮಹಿಳೆಯರಿಗೆ 400 ಮೀಟರ್ ಓಟ ಸೇರಿದಂತೆ ವಿವಿಧ ದೈಹಿಕ ಪರೀಕ್ಷೆಗಳು ನಡೆಯಲಿವೆ.
ವೈದ್ಯಕೀಯ ತಪಾಸಣೆ :
ದೈಹಿಕ ಪರೀಕ್ಷೆಯಲ್ಲಿ ಅರ್ಹರಾದ ಅಭ್ಯರ್ಥಿಗಳನ್ನು 1:2 ಅನುಪಾತದಲ್ಲಿ ಕಿರುಪಟ್ಟಿ ಮಾಡಿ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗುತ್ತದೆ. ವೈದ್ಯಕೀಯ ಪರೀಕ್ಷೆಯಲ್ಲಿ ಅರ್ಹತೆ ಪಡೆದವರನ್ನು ಅಂತಿಮ ಆಯ್ಕೆ ಪಟ್ಟಿಗೆ ಪರಿಗಣಿಸಲಾಗುತ್ತದೆ.
ಅರ್ಜಿ ಸಲ್ಲಿಸುವುದು ಹೇಗೆ?
ಅಭ್ಯರ್ಥಿಗಳು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಅಧಿಕೃತ ವೆಬ್‌ಸೈಟ್ ಹಾಗೂ ಪೊಲೀಸ್ ನೇಮಕಾತಿ ಪೋರ್ಟಲ್ ಮೂಲಕ ಆನ್‌ಲೈನ್ ಅರ್ಜಿ ಸಲ್ಲಿಸಬಹುದು.
ಅರ್ಜಿ ಸಲ್ಲಿಸುವ ಮುನ್ನ ಅಧಿಕೃತ ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿ, ಅಗತ್ಯ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ಅರ್ಜಿ ಪ್ರಕ್ರಿಯೆ ಪೂರ್ಣಗೊಳಿಸುವುದು ಸೂಕ್ತ.
ರಾಜ್ಯದಲ್ಲಿ ಸರ್ಕಾರಿ ಉದ್ಯೋಗದ ನಿರೀಕ್ಷೆಯಲ್ಲಿರುವ ಸಾವಿರಾರು ಅಭ್ಯರ್ಥಿಗಳಿಗೆ ಈ ನೇಮಕಾತಿ ಉತ್ತಮ ಅವಕಾಶವಾಗಿದ್ದು, ನಿಗದಿತ ದಿನಾಂಕದೊಳಗೆ ಅರ್ಜಿ ಸಲ್ಲಿಸುವಂತೆ ಇಲಾಖೆ ಸೂಚಿಸಿದೆ.
ಇತ್ತೀಚಿನ ಎಲ್ಲಾ ಪ್ರಮುಖ ಸುದ್ದಿಗಳನ್ನು ಇಲ್ಲಿ ಓದಿ
ಆಸಕ್ತ ಅಭ್ಯರ್ಥಿಗಳು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಅಧಿಕೃತ ವೆಬ್‌ಸೈಟ್ ಮೂಲಕ ಆನ್‌ಲೈನ್ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಸುವ ಮೊದಲು ಅಧಿಕೃತ ಅಧಿಸೂಚನೆಯನ್ನು ಓದಿ ಅಗತ್ಯ ದಾಖಲೆಗಳನ್ನು ಸಿದ್ಧಪಡಿಸಿಕೊಳ್ಳುವುದು ಸೂಕ್ತ. ಹೆಚ್ಚಿನ ಮಾಹಿತಿಗಾಗಿ KEA ಸಹಾಯವಾಣಿ ಸಂಖ್ಯೆ 080-23460460 ಅನ್ನು ಸಂಪರ್ಕಿಸಬಹುದು.
ಅರ್ಹ ಅಭ್ಯರ್ಥಿಗಳು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಅಧಿಕೃತ ವೆಬ್‌ಸೈಟ್ : https://cetonline.karnataka.gov.in/kea/
Disclaimer: ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿಗೆ ಸಂಬಂಧಿಸಿದ ಅರ್ಹತೆ, ಮೀಸಲಾತಿ, ಪರೀಕ್ಷಾ ವಿಧಾನ ಹಾಗೂ ಇತರೆ ಷರತ್ತುಗಳ ಕುರಿತು ಅಧಿಕೃತ ಅಧಿಸೂಚನೆಯೇ ಅಂತಿಮವಾಗಿರುತ್ತದೆ. ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮೊದಲು ಅಧಿಕೃತ ಅಧಿಸೂಚನೆಯನ್ನು ಕಡ್ಡಾಯವಾಗಿ ಪರಿಶೀಲಿಸುವುದು ಸೂಕ್ತ.





