ನೀವು ಪದವೀಧರರೇ? ಕೃಷಿ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಈಗಲೇ ಅರ್ಜಿ ಸಲ್ಲಿಸಿ.

ಕೃಷಿ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಈಗಲೇ ಅರ್ಜಿ ಸಲ್ಲಿಸಿ

ಉದ್ಯೋಗ ಮಾಹಿತಿ : ನೀವು ಪದವೀಧರರೇ ಕೃಷಿ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಈಗಲೇ ಅರ್ಜಿ ಸಲ್ಲಿಸಿ. ಹುದ್ದೆಗಳಿಗೆ ಬೇಕಾದ ಹುದ್ದೆಗಳ ವಿವರ, ವಯೋಮಿತಿ, ವಿದ್ಯಾರ್ಹತೆ ಸೇರಿದಂತೆ ಪ್ರಮುಖ ಮಾಹಿತಿಯನ್ನು ಇಲ್ಲಿ ಕೊಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಅಧಿಕೃತ ನೋಟಿಪಿಕೇಷನ್‌ ತಪ್ಪದೆ ಓದಿ.

ಸರ್ಕಾರಿ ಉದ್ಯೋಗಕ್ಕಾಗಿ ಕಾಯುತ್ತಿರುವ ಅಭ್ಯರ್ಥಿಗಳಿಗೆ ಮತ್ತೊಂದು ಉತ್ತಮ ಅವಕಾಶ ದೊರೆತಿದೆ. ಕರ್ನಾಟಕದ ಕೃಷಿ ಇಲಾಖೆ ಹೊಸ ನೇಮಕಾತಿ ಅಧಿಸೂಚನೆ ಪ್ರಕಟಿಸಿದ್ದು, ಅರ್ಹ ಅಭ್ಯರ್ಥಿಗಳಿಂದ ನಿಗದಿತ ದಿನಾಂಕದೊಳಗೆ ವಿವಿಧ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಈ ನೇಮಕಾತಿ ಪ್ರಕ್ರಿಯೆಯನ್ನು ಹಾವೇರಿ ಜಿಲ್ಲೆಯ ಕೃಷಿ ಇಲಾಖೆ ನಡೆಸುತ್ತಿದ್ದು, ಒಟ್ಟು 7 ಹುದ್ದೆಗಳನ್ನು ಭರ್ತಿ ಮಾಡಲು ಪ್ರಕಟಣೆ ಹೊರಡಿಸಲಾಗಿದೆ.

ಕೃಷಿ ಇಲಾಖೆಯಲ್ಲಿರುವ ಹುದ್ದೆಗಳ ಮಾಹಿತಿ :

ಇಲಾಖೆಯ ಮಾಹಿತಿ ಪ್ರಕಾರ ತಾಲ್ಲೂಕು ತಾಂತ್ರಿಕ ವ್ಯವಸ್ಥಾಪಕ (BTM) ಹುದ್ದೆ 1 ಹಾಗೂ ಸಹಾಯಕ ತಾಂತ್ರಿಕ ವ್ಯವಸ್ಥಾಪಕ (ATM) ಹುದ್ದೆಗಳು 6 ಸೇರಿ ಒಟ್ಟು ಏಳು ಹುದ್ದೆಗಳು ಲಭ್ಯವಿವೆ. ಆಯ್ಕೆಯಾದ ಅಭ್ಯರ್ಥಿಗಳಿಗೆ ಹಾವೇರಿ ಜಿಲ್ಲೆಯಲ್ಲಿ ಕೆಲಸ ಮಾಡುವ ಅವಕಾಶ ದೊರೆಯಲಿದೆ.

ಯಾರು ಅರ್ಜಿ ಸಲ್ಲಿಸಬಹುದು?

ಕೃಷಿ ಇಲಾಖೆ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯದಿಂದ ಪದವಿ ಅಥವಾ ಸ್ನಾತಕೋತ್ತರ ಪದವಿ ಪೂರ್ಣಗೊಳಿಸಿರಬೇಕು.

Note : ಸಂಬಂಧಿತ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಮಾತ್ರ ಈ ನೇಮಕಾತಿಗೆ ಅರ್ಹರಾಗುತ್ತಾರೆ.

ವಯೋಮಿತಿ ಮತ್ತು ಸಡಿಲಿಕೆ :

ಇದನ್ನು ಓದಿ : ಉದ್ಯೋಗಾಕಾಂಕ್ಷಿಗಳಿಗೆ ಗುಡ್‌ ನ್ಯೂಸ್: 572 VAO ಹುದ್ದೆಗಳ ಭರ್ತಿಗೆ ಗ್ರೀನ್ ಸಿಗ್ನಲ್.

ವಯೋಮಿತಿ :

ಅಭ್ಯರ್ಥಿಗಳ ಗರಿಷ್ಠ ವಯಸ್ಸು 45 ವರ್ಷ ಮೀರಿರಬಾರದು ಎಂದು ಅಧಿಸೂಚನೆಯಲ್ಲಿ ಸ್ಪಷ್ಟಪಡಿಸಲಾಗಿದೆ. ಮೀಸಲಾತಿ ನಿಯಮಗಳ ಪ್ರಕಾರ ಕೆಲವು ವರ್ಗಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗಿದೆ.

ವಯೋಮಿತಿ ಸಡಿಲಿಕೆ :

  • ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ ಸಡಿಲಿಕೆ.
  • ಎಸ್‌ಸಿ/ಎಸ್‌ಟಿ ಅಭ್ಯರ್ಥಿಗಳಿಗೆ 5 ವರ್ಷ ಸಡಿಲಿಕೆ.
  • ಪಿಡಬ್ಲ್ಯೂಬಿಡಿ (ಯುಆರ್/ಇಡಬ್ಲ್ಯೂಎಸ್) ಅಭ್ಯರ್ಥಿಗಳಿಗೆ 10 ವರ್ಷ ಸಡಿಲಿಕೆ.
  • ಪಿಡಬ್ಲ್ಯೂಬಿಡಿ ಒಬಿಸಿ ಅಭ್ಯರ್ಥಿಗಳಿಗೆ 13 ವರ್ಷ ಸಡಿಲಿಕೆ.
  • ಪಿಡಬ್ಲ್ಯೂಬಿಡಿ ಎಸ್‌ಸಿ/ಎಸ್‌ಟಿ ಅಭ್ಯರ್ಥಿಗಳಿಗೆ 15 ವರ್ಷ ಸಡಿಲಿಕೆ ಲಭ್ಯವಿದೆ.

ಈ ಸುದ್ದಿಯನ್ನು ಓದಿ : ಕ್ರಿಕೆಟ್ ಆಡುತ್ತಿದ್ದ ವೇಳೆ ಮಹಿಳೆ ತಗುಲಿದ ಚೆಂಡು; ಇಬ್ಬರು ಅಪ್ರಾಪ್ತರನ್ನು ಕಿಟಕಿಗೆ ಕಟ್ಟಿ ಹಾಕಿ ಹಲ್ಲೆ.

ಅರ್ಜಿ ಸಲ್ಲಿಸುವ ವಿಧಾನ :

ಅಭ್ಯರ್ಥಿಗಳು ಮೊದಲು ಅಧಿಕೃತ ಅಧಿಸೂಚನೆಯನ್ನು ಡೌನ್‌ಲೋಡ್ ಮಾಡಿಕೊಂಡು ಅರ್ಹತೆಗಳನ್ನು ಪರಿಶೀಲಿಸಬೇಕು. ನಂತರ ಅರ್ಜಿ ನಮೂನೆಯನ್ನು ಸರಿಯಾಗಿ ಭರ್ತಿ ಮಾಡಿ ಅಗತ್ಯ ದಾಖಲೆಗಳನ್ನು ಲಗತ್ತಿಸಬೇಕು. ಅರ್ಜಿ ಸಲ್ಲಿಸುವಾಗ ಮಾಹಿತಿ ತಪ್ಪಿಲ್ಲದಂತೆ ಮತ್ತೊಮ್ಮೆ ಪರಿಶೀಲನೆ ಮಾಡುವುದು ಮುಖ್ಯ.

ಅರ್ಜಿ ಸಲ್ಲಿಸಲು ನಿಗದಿಪಡಿಸಿರುವ ವಿಳಾಸ:

ಕೃಷಿ ಇಲಾಖೆ, ಜಂಟಿ ಕೃಷಿ ನಿರ್ದೇಶಕರು, ಜಿಲ್ಲಾಡಳಿತ ಕಟ್ಟಡ, ದೇವಗಿರಿ – 581110

ಪ್ರಮುಖ ದಿನಾಂಕಗಳು :

ಈ ನೇಮಕಾತಿಗೆ 2026ರ ಮೇ 30ರಿಂದ ಅರ್ಜಿ ಸಲ್ಲಿಕೆ ಪ್ರಾರಂಭವಾಗಿದೆ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಜೂನ್ 25, 2026 ಎಂದು ಪ್ರಕಟಿಸಲಾಗಿದೆ.

ರಾಜ್ಯದಲ್ಲಿ ಸರ್ಕಾರಿ ಉದ್ಯೋಗಕ್ಕಾಗಿ ಕಾಯುತ್ತಿರುವ ಪದವೀಧರರಿಗೆ ಇದು ಉತ್ತಮ ಅವಕಾಶವಾಗಿದ್ದು, ಕೃಷಿ ಕ್ಷೇತ್ರದಲ್ಲಿ ಕೆಲಸ ಮಾಡಲು ಆಸಕ್ತಿ ಇರುವವರು ಈ ಅವಕಾಶವನ್ನು ತಪ್ಪಿಸಿಕೊಳ್ಳಬಾರದು.

ಪ್ರಮುಖ ಲಿಂಕ್‌ :

ಇತ್ತೀಚಿನ ಎಲ್ಲಾ ಪ್ರಮುಖ ಸುದ್ದಿಗಳನ್ನು ಇಲ್ಲಿ ಓದಿ 


Disclaimer: ಈ ಲೇಖನವು ಸಾರ್ವಜನಿಕವಾಗಿ ಲಭ್ಯವಿರುವ ನೇಮಕಾತಿ ಮಾಹಿತಿಯ ಆಧಾರದ ಮೇಲೆ ಸಿದ್ಧಪಡಿಸಲಾಗಿದೆ. ಅರ್ಜಿ ಸಲ್ಲಿಸುವ ಮೊದಲು ಅಭ್ಯರ್ಥಿಗಳು ಅಧಿಕೃತ ಅಧಿಸೂಚನೆಯನ್ನು ಪರಿಶೀಲಿಸುವುದು ಸೂಕ್ತ.

Leave a Comment

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Scroll to Top