ಬೆಂಗಳೂರು: ಸರ್ಕಾರಿ ಉದ್ಯೋಗಕ್ಕಾಗಿ ಕಾಯುತ್ತಿರುವ ಅಭ್ಯರ್ಥಿಗಳಿಗೆ ಕರ್ನಾಟಕ ಲೋಕಾಯುಕ್ತ ಇಲಾಖೆಯಿಂದ ಉತ್ತಮ ಅವಕಾಶ ದೊರೆತಿದೆ. ಕರ್ನಾಟಕ ಲೋಕಾಯುಕ್ತ (Karnataka Lokayukta) 2026ನೇ ಸಾಲಿನ ನೇಮಕಾತಿ ಅಧಿಸೂಚನೆಯನ್ನು ಪ್ರಕಟಿಸಿದ್ದು, ಗುಮಾಸ್ತ (Clerk) ಹಾಗೂ ಬೆರಳಚ್ಚುಗಾರ (Typist) ಸೇರಿದಂತೆ ಒಟ್ಟು 25 ಹುದ್ದೆಗಳ ಭರ್ತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ.
ಈ ನೇಮಕಾತಿಗೆ ಅರ್ಜಿ ಸಲ್ಲಿಸಲು ಆಸಕ್ತರು ಮಾನ್ಯತೆ ಪಡೆದ ಶಿಕ್ಷಣ ಮಂಡಳಿ ಅಥವಾ ವಿಶ್ವವಿದ್ಯಾಲಯದಿಂದ 12ನೇ ತರಗತಿ (PUC) ಉತ್ತೀರ್ಣರಾಗಿರಬೇಕು. ನೇಮಕಾತಿ ಪ್ರಕ್ರಿಯೆಯು ಆಫ್‌ಲೈನ್ ವಿಧಾನದಲ್ಲಿ ನಡೆಯಲಿದ್ದು, ಅಭ್ಯರ್ಥಿಗಳು ಅಧಿಕೃತ ಅಧಿಸೂಚನೆಯಲ್ಲಿ ನೀಡಿರುವ ಸೂಚನೆಗಳಂತೆ ಅರ್ಜಿ ಸಲ್ಲಿಸಬೇಕಿದೆ.
ಕರ್ನಾಟಕ ಲೋಕಾಯುಕ್ತ ಹುದ್ದೆಗಳ ವಿವರ :
- ಇಲಾಖೆ: ಕರ್ನಾಟಕ ಲೋಕಾಯುಕ್ತ.
- ಹುದ್ದೆಗಳ ಸಂಖ್ಯೆ: 25.
- ಹುದ್ದೆಗಳ ಹೆಸರು: ಗುಮಾಸ್ತ ಮತ್ತು ಬೆರಳಚ್ಚುಗಾರ.
- ಉದ್ಯೋಗ ಸ್ಥಳ: ಬೆಂಗಳೂರು, ಕರ್ನಾಟಕ.
- ಅರ್ಜಿ ಸಲ್ಲಿಸುವ ವಿಧಾನ: ಆಫ್‌ಲೈನ್.
ಮಾಸಿಕ ವೇತನ :
- ಅಧಿಕೃತ ಅಧಿಸೂಚನೆಯ ಪ್ರಕಾರ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ₹34,100 ರಿಂದ ₹67,600ರವರೆಗೆ ಮಾಸಿಕ ವೇತನ ನೀಡಲಾಗುತ್ತದೆ. ಸರ್ಕಾರಿ ಸೇವೆಯ ಇತರ ಸೌಲಭ್ಯಗಳು ಹಾಗೂ ನಿಯಮಾನುಸಾರ ಭತ್ಯೆಗಳೂ ಅನ್ವಯವಾಗಲಿವೆ.
ವಯೋಮಿತಿ :
- ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಠ 18 ವರ್ಷ ವಯಸ್ಸು.
- ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಗರಿಷ್ಠ 40 ವರ್ಷ ನಿಗದಿಪಡಿಸಲಾಗಿದ್ದು,
ಇದನ್ನು ಓದಿ : 560 ಭೂಮಾಪಕರ ಹುದ್ದೆಗಳಿಗೆ ಅರ್ಜಿ ಆಹ್ವಾನ; ₹76,100 ವೇತನ, ಇಂದಿನಿಂದ ಅರ್ಜಿ ಸಲ್ಲಿಕೆ ಆರಂಭ.!
Note : ಸರ್ಕಾರದ ನಿಯಮಗಳ ಪ್ರಕಾರ ಮೀಸಲಾತಿ ಅಭ್ಯರ್ಥಿಗಳಿಗೆ ವಯೋಸಡಿಲಿಕೆ ಅನ್ವಯವಾಗಬಹುದು.
ಶೈಕ್ಷಣಿಕ ಅರ್ಹತೆ :
- ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯದಿಂದ 12ನೇ ತರಗತಿ (PUC) ಪೂರ್ಣಗೊಳಿಸಿರಬೇಕು. ಅರ್ಜಿ ಸಲ್ಲಿಸುವ ಮೊದಲು ಅಧಿಕೃತ ಅಧಿಸೂಚನೆಯಲ್ಲಿ ನೀಡಿರುವ ಅರ್ಹತಾ ಷರತ್ತುಗಳನ್ನು ಸಂಪೂರ್ಣವಾಗಿ ಪರಿಶೀಲಿಸುವುದು ಸೂಕ್ತ.
ಅರ್ಜಿ ಶುಲ್ಕ :
- ಪ್ರವರ್ಗ 2A, 2B, 3A, 3B ಹಾಗೂ ಮಾಜಿ ಸೈನಿಕ ಅಭ್ಯರ್ಥಿಗಳು: ₹250/-
- SC/ST ಹಾಗೂ PwD ಅಭ್ಯರ್ಥಿಗಳು: ಅರ್ಜಿ ಶುಲ್ಕ ಇಲ್ಲ.
ಆಯ್ಕೆ ಪ್ರಕ್ರಿಯೆ :
ನೇಮಕಾತಿಯು ಎರಡು ಪ್ರಮುಖ ಹಂತಗಳಲ್ಲಿ ನಡೆಯಲಿದೆ.
- ಲಿಖಿತ ಪರೀಕ್ಷೆ.
- ಮೆರಿಟ್ ಪಟ್ಟಿ ಆಧಾರಿತ ಆಯ್ಕೆ.
ಈ ಸುದ್ದಿಯನ್ನು ಓದಿ : ರೈಲು ಡಿಕ್ಕಿಯಾಗುವ ಕ್ಷಣದಲ್ಲೇ ಜೀವ ಉಳಿಸಿದ ಗೇಟ್‌ಕೀಪರ್; ರೋಚಕ ವಿಡಿಯೋ ವೈರಲ್!
ಅಧಿಕೃತ ಅಧಿಸೂಚನೆಯಲ್ಲಿರುವ ನಿಯಮಗಳಂತೆ ಅಂತಿಮ ಆಯ್ಕೆ ಪ್ರಕ್ರಿಯೆ ಪೂರ್ಣಗೊಳ್ಳಲಿದೆ.
ಪ್ರಮುಖ ದಿನಾಂಕಗಳು :
- ಅರ್ಜಿ ಸಲ್ಲಿಕೆ ಆರಂಭಿಕ ದಿನ : 17 ಜುಲೈ 2026.
- ಅರ್ಜಿ ಸಲ್ಲಿಸಲು ಕೊನೆಯ ದಿನ : 17 ಆಗಸ್ಟ್ 2026.
Note : ಅಭ್ಯರ್ಥಿಗಳು ಕೊನೆಯ ದಿನಾಂಕದವರೆಗೆ ಕಾಯದೆ ಸಾಧ್ಯವಾದಷ್ಟು ಬೇಗ ಅರ್ಜಿ ಸಲ್ಲಿಸುವುದು ಉತ್ತಮ.
ಅರ್ಜಿ ಸಲ್ಲಿಸುವ ವಿಧಾನ :
ಅಭ್ಯರ್ಥಿಗಳು ಮೊದಲು ಅಧಿಕೃತ ಅಧಿಸೂಚನೆಯನ್ನು ಡೌನ್‌ಲೋಡ್ ಮಾಡಿ ಸಂಪೂರ್ಣವಾಗಿ ಓದಬೇಕು. ಬಳಿಕ ಅರ್ಜಿ ನಮೂನೆಯನ್ನು ಸರಿಯಾಗಿ ಭರ್ತಿ ಮಾಡಿ, ಅಗತ್ಯ ದಾಖಲೆಗಳು, ಪಾಸ್‌ಪೋರ್ಟ್ ಗಾತ್ರದ ಭಾವಚಿತ್ರ ಹಾಗೂ ಸಹಿಯನ್ನು ಲಗತ್ತಿಸಬೇಕು.
ಅನ್ವಯಿಸುವ ಅರ್ಜಿ ಶುಲ್ಕವನ್ನು ಪಾವತಿಸಿದ ನಂತರ ಪೂರ್ಣಗೊಂಡ ಅರ್ಜಿಯನ್ನು ಅಧಿಸೂಚನೆಯಲ್ಲಿ ಸೂಚಿಸಿರುವ ವಿಳಾಸಕ್ಕೆ ನಿಗದಿತ ಅವಧಿಯೊಳಗೆ ಸಲ್ಲಿಸಬೇಕು. ಭವಿಷ್ಯದ ಉಲ್ಲೇಖಕ್ಕಾಗಿ ಅರ್ಜಿಯ ಪ್ರತಿಯನ್ನು ಉಳಿಸಿಕೊಳ್ಳುವುದು ಒಳಿತು.
Note : ಹೆಚ್ಚಿನ ಮಾಹಿತಿ, ಅಧಿಕೃತ ಅಧಿಸೂಚನೆ ಹಾಗೂ ಅರ್ಜಿ ನಮೂನೆಗಾಗಿ ಅಭ್ಯರ್ಥಿಗಳು ಕರ್ನಾಟಕ ಲೋಕಾಯುಕ್ತದ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಎಲ್ಲಾ ಸೂಚನೆಗಳನ್ನು ಪರಿಶೀಲಿಸಬಹುದು.
ಇತ್ತೀಚಿನ ಎಲ್ಲಾ ಪ್ರಮುಖ ಸುದ್ದಿಗಳನ್ನು ಇಲ್ಲಿ ಓದಿ
Disclaimer: ಈ ಲೇಖನವು ಕರ್ನಾಟಕ ಲೋಕಾಯುಕ್ತ ಇಲಾಖೆಯ ನೇಮಕಾತಿ ಅಧಿಸೂಚನೆಯಲ್ಲಿ ಲಭ್ಯವಿರುವ ಮಾಹಿತಿಯನ್ನು ಆಧರಿಸಿ ಸಿದ್ಧಪಡಿಸಲಾಗಿದೆ. ಅರ್ಜಿ ಸಲ್ಲಿಸುವ ಮೊದಲು ಅಭ್ಯರ್ಥಿಗಳು ಅಧಿಕೃತ ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿ, ಅರ್ಹತೆ, ದಿನಾಂಕಗಳು ಹಾಗೂ ಇತರ ನಿಯಮಗಳನ್ನು ದೃಢಪಡಿಸಿಕೊಳ್ಳುವುದು ಕಡ್ಡಾಯ.







