ಬೆಳಗಾವಿಯಲ್ಲಿ ಅಕ್ರಮ ಕಂಟ್ರಿ ಪಿಸ್ತೂಲ್ ಜಾಲ ಬಯಲು: 13 ಮಂದಿ ಬಂಧನ.

ಬೆಳಗಾವಿಯಲ್ಲಿ ಅಕ್ರಮ ಕಂಟ್ರಿ ಪಿಸ್ತೂಲ್ ಜಾಲ ಬಯಲು

ಬೆಳಗಾವಿ: ಬೆಳಗಾವಿ ಜಿಲ್ಲೆಯ ಗಡಿಯಲ್ಲಿ ಅಕ್ರಮವಾಗಿ ಕಂಟ್ರಿ ಪಿಸ್ತೂಲ್ ತಯಾರಿಸುತ್ತಿದ್ದ ಜಾಲವೊಂದನ್ನು ಪೊಲೀಸರು ಬಯಲು ಮಾಡಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ 13 ಜನರನ್ನು ಬಂಧಿಸಿದ್ದು, ಬಂಧಿತರಿಂದ 9 ಪಿಸ್ತೂಲ್‌ಗಳನ್ನು ಜಪ್ತಿ ಮಾಡಲಾಗಿದೆ.

ರಾಜ್ಯದ ಗಡಿಜಿಲ್ಲೆ ಬೆಳಗಾವಿಯಲ್ಲಿ ಅಕ್ರಮವಾಗಿ Country Pistol ಗಳನ್ನು ತಯಾರಿಸಿ ಮಾರಾಟ ಮಾಡುತ್ತಿದ್ದ ದೊಡ್ಡ ಜಾಲವನ್ನು ಪೊಲೀಸರು ಭೇದಿಸಿದ್ದು, ಈ ಪ್ರಕರಣಕ್ಕೆ ಸಂಬಂಧಿಸಿದಂತೆ 13 ಆರೋಪಿಗಳನ್ನು ಬಂಧಿಸಿದ್ದಾರೆ.

ಈ ವೇಳೆ ಹಲವು ಶಸ್ತ್ರಾಸ್ತ್ರಗಳು, ಮದ್ದುಗುಂಡುಗಳು ಹಾಗೂ ಬಂದೂಕು ತಯಾರಿಕೆಗೆ ಬಳಸಲಾಗುತ್ತಿದ್ದ ವಿವಿಧ ಬಿಡಿಭಾಗಗಳನ್ನು ಬಂಧಿತರಿಂದ ವಶಪಡಿಸಿಕೊಳ್ಳಲಾಗಿದೆ. ಆರೋಪಿತರಲ್ಲಿ ಓರ್ವ ಸಿಂಗಲ್ ಮತ್ತು ಡಬಲ್ ಲೋಡೆಡ್ ಕಂಟ್ರಿ ಪಿಸ್ತೂಲ್‌ ತಯಾರಿಸುತ್ತಿದ್ದನೆಂದು ಹೇಳಲಾಗುತ್ತಿದೆ.

ಪ್ರಕರಣ ಬೆಳಕಿಗೆ ಬಂದದ್ದು ಹೇಗೆ :

ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನಲ್ಲಿ ನಡೆದಿದ್ದ ಕೊಲೆ ಪ್ರಕರಣದ ತನಿಖೆ ನಡೆಸುತ್ತಿದ್ದ ವೇಳೆ ಪೊಲೀಸರು ಮಹತ್ವದ ಸುಳಿವು ಪತ್ತೆಹಚ್ಚಿದ್ದರು. ಕೊಲೆ ಕೃತ್ಯದಲ್ಲಿ Country Pistol ಬಳಸಿರುವುದು ತನಿಖೆ ವೇಳೆ ತಿಳಿದು ಬಂದಿತ್ತು. ಈ  ನಂತರ ಕಂಟ್ರಿ ಪಿಸ್ತೂಲ್ ಮೂಲವನ್ನು ಪತ್ತೆಹಚ್ಚಲು ಮುಂದಾದಾಗ ಅಕ್ರಮ ಬಂದೂಕು ತಯಾರಿಕಾ ಜಾಲ ಬೆಳಕಿಗೆ ಬಂದಿದೆ.

ಪೊಲೀಸರ ತನಿಖೆ ಪ್ರಕಾರ, ಖಾನಾಪುರ ಸಮೀಪದ ಕಾಟಗಾಳಿ ಗ್ರಾಮದಲ್ಲಿ ಕಳೆದ ಕೆಲ ವರ್ಷಗಳಿಂದ ಗುಪ್ತವಾಗಿ Country Pistol ಗಳನ್ನು ತಯಾರಿಸಲಾಗುತ್ತಿತ್ತು. ಬಂಧಿತ ಆರೋಪಿಗಳ ಪೈಕಿ ಕೆಲವರು ಬಂದೂಕು ತಯಾರಿಕೆಗೆ ಹಣಕಾಸು ನೆರವು ಹಾಗೂ ಇನ್ನೂ ಕೆಲವರು ಬಿಡಿಭಾಗಗಳ ಪೂರೈಕೆಯಲ್ಲಿ ತೊಡಗಿಸಿಕೊಂಡಿದ್ದರು ಎಂದು ತಿಳಿದುಬಂದಿದೆ.

9 ಕಂಟ್ರಿ ಪಿಸ್ತೂಲ್‌ ವಶಕ್ಕೆ :

ಕಾರ್ಯಾಚರಣೆಯ ವೇಳೆ ಪೊಲೀಸರು ಒಟ್ಟು 9 ಕಂಟ್ರಿ ಪಿಸ್ತೂಲ್‌ಗಳನ್ನು ವಶಪಡಿಸಿಕೊಂಡಿದ್ದಾರೆ. ಇದರಲ್ಲಿ ಒಂದು ತಯಾರಿಕಾ ಹಂತದಲ್ಲಿದ್ದರೆ, ಉಳಿದವುಗಳನ್ನು ವಿವಿಧ ವ್ಯಕ್ತಿಗಳಿಗೆ ಮಾರಾಟ ಮಾಡಲಾಗಿತ್ತು ಎಂದು ತನಿಖೆಯಿಂದ ತಿಳಿದುಬಂದಿದೆ.

ಇದರ ಜೊತೆಗೆ ಬಂದೂಕು ತಯಾರಿಕೆಗೆ ಬಳಸಲಾಗುತ್ತಿದ್ದ ಟ್ರಿಗರ್‌ಗಳು, ನಿಪ್ಪಲ್‌ಗಳು, ಹೆಡ್‌ಗಳು, ಮದ್ದು ತುಂಬಿದ ಪ್ಯಾಕೆಟ್‌ಗಳು, ನೂರಾರು ಸೀಸಿನ ಗೋಲಿಗಳು, ಕೇಪ್‌ಗಳು ಹಾಗೂ ಜೀವಂತ ಕಾರ್ತೂಸ್‌ಗಳನ್ನು ಸಹ ಪೊಲೀಸರು ಜಪ್ತಿ ಮಾಡಿದ್ದಾರೆ.

ಇದನ್ನು ಓದಿ : ಗೃಹಲಕ್ಷ್ಮಿ ಯೋಜನೆಗೆ ಹೊಸ ರೂಲ್ಸ್;‌ ಈ ಕೆಲಸ ಮಾಡದಿದ್ದರೆ ಹಣ ಕಟ್.

ವಶಪಡಿಸಿಕೊಂಡ ವಸ್ತುಗಳ ಪ್ರಮಾಣದಿಂದಾಗಿ ಆರೋಪಿಗಳು ಅಕ್ರಮ ಶಸ್ತ್ರಾಸ್ತ್ರ ಚಟುವಟಿಕೆಯಲ್ಲಿ ವ್ಯಾಪಕವಾಗಿ ತೊಡಗಿಕೊಂಡಿರುವ ಶಂಕೆ ವ್ಯಕ್ತವಾಗಿದೆ.

ಕಂಟ್ರಿ ಪಿಸ್ತೂಲ್‌ ಬಳಕೆಯ ಬಗ್ಗೆ ತನಿಖೆ :

ಪ್ರಾಥಮಿಕ ತನಿಖೆಯಲ್ಲಿ ಇಲ್ಲಿ ತಯಾರಾದ ಈ Country Pistol ಗಳನ್ನು ಕೆಲವರು ಬೇಟೆ ಸೇರಿದಂತೆ ವಿವಿಧ ಉದ್ದೇಶಗಳಿಗೆ ಬಳಸುತ್ತಿದ್ದರೆಂಬ ಮಾಹಿತಿ ಲಭ್ಯವಾಗಿದೆ. ಆದರೆ ಈ ನಾಡ ಪಿಸ್ತೂಲ್‌ ಇನ್ನಾವುದೇ ಅಪರಾಧ ಚಟುವಟಿಕೆಗಳಲ್ಲಿ ಬಳಕೆಯಾಗಿದ್ದವೆಯೇ ಎಂಬುದನ್ನು ಪೊಲೀಸರು ಪರಿಶೀಲಿಸುತ್ತಿದ್ದಾರೆ.

ಬಂಧಿತ ಆರೋಪಿತರನ್ನು ಮಾರುತಿ, ಸೋಮನಾಥ, ಸಂತೋಷ, ಮಾರುತಿ, ಬಾಳು, ಲಕ್ಷ್ಮಣ, ಬಸವರಾಜ, ಬಸವಂತ, ಲಕ್ಷ್ಮಣ, ಮರಿಯಪ್ಪ, ವಿಶ್ವನಾಥ ಎಂದು ಗುರುತಿಸಲಾಗಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಖಾನಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಬಂಧಿತ ಆರೋಪಿಗಳ ವಿಚಾರಣೆ ಮುಂದುವರಿದಿದೆ. ಈ ಜಾಲದ ಹಿಂದೆ ಇನ್ನೂ ಯಾರಾದರೂ ಇದ್ದಾರೆಯೇ ಎಂಬ ಬಗ್ಗೆ ಪೊಲೀಸರು ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ.

ಇತ್ತೀಚಿನ ಎಲ್ಲಾ ಪ್ರಮುಖ ಸುದ್ದಿಗಳನ್ನು ಇಲ್ಲಿ ಓದಿ


Disclaimer: ಕಂಟ್ರಿ ಪಿಸ್ತೂಲ್ ವರದಿ ಪೊಲೀಸ್ ಮೂಲಗಳಿಂದ ಲಭ್ಯವಾದ ಪ್ರಾಥಮಿಕ ಮಾಹಿತಿಯನ್ನು ಆಧರಿಸಿ ಸಿದ್ಧಪಡಿಸಲಾಗಿದೆ. ತನಿಖೆ ಮುಂದುವರಿದಿರುವುದರಿಂದ ಮುಂದಿನ ದಿನಗಳಲ್ಲಿ ಹೆಚ್ಚಿನ ಮಾಹಿತಿ ಹೊರಬರುವ ಸಾಧ್ಯತೆ ಇದೆ.

Leave a Comment

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Scroll to Top