ನೌಕರಿ ಮಾಹಿತಿ :ಕೇಂದ್ರ ಸರ್ಕಾರಿ ಉದ್ಯೋಗದ ನಿರೀಕ್ಷೆಯಲ್ಲಿದ್ದ ದೇಶದ ಯುವಕ-ಯುವತಿಯರಿಗೆ ಆದಾಯ ತೆರಿಗೆ ಇಲಾಖೆಯು (Income Tax Department) ಭರ್ಜರಿ ಸಿಹಿ ಸುದ್ದಿಯನ್ನು ನೀಡಿದೆ. ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗಾಗಿ ಹೊಸ ನೇಮಕಾತಿ ಅಧಿಸೂಚನೆ (Official Notification) ಹೊರಬಿದ್ದಿದೆ.
ಆದಾಯ ತೆರಿಗೆ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದ್ದು, ಅರ್ಹ ಅಭ್ಯರ್ಥಿಗಳು ನಿಗದಿತ ದಿನಾಂಕದೊಳಗೆ ಅರ್ಜಿ ಸಲ್ಲಿಸಬಹುದಾಗಿದೆ. ದೇಶದಾದ್ಯಂತ ನೇಮಕಾತಿ ನಡೆಯಲಿರುವುದರಿಂದ ನಮ್ಮ ರಾಜ್ಯದ ಅಭ್ಯರ್ಥಿಗಳು ಸಹ ಈ ಅವಕಾಶವನ್ನು ಬಳಸಿಕೊಳ್ಳಬಹುದು.
ಆದಾಯ ತೆರಿಗೆ ಇಲಾಖೆಯ ಹುದ್ದೆಗಳ ಮಾಹಿತಿ :
ಈ ನೇಮಕಾತಿ ಪ್ರಕ್ರಿಯೆಯಲ್ಲಿ ಒಟ್ಟು 12 ಹುದ್ದೆಗಳು ಖಾಲಿ ಇದ್ದು, ಭಾರತದೆಲ್ಲೆಡೆ ಉದ್ಯೋಗ ಸ್ಥಳ ಇರಲಿದ್ದು, ಕೇಂದ್ರ ಸರ್ಕಾರದ ಅಧೀನದಲ್ಲಿ ಕೆಲಸ ಮಾಡುವ ಅವಕಾಶ ಇದಾಗಿದೆ.
- MTS (ಮಲ್ಟಿ ಟಾಸ್ಕಿಂಗ್ ಸ್ಟಾಫ್),
- ಸ್ಟೆನೋಗ್ರಾಫರ್ ಹಾಗೂ
- ಟ್ಯಾಕ್ಸ್ ಅಸಿಸ್ಟೆಂಟ್ ಹುದ್ದೆಗಳನ್ನು ಒಳಗೊಂಡಿದೆ.
Note : ವಿಶೇಷವಾಗಿ ಈ ನೇಮಕಾತಿ “ಕ್ರೀಡಾ ಕೋಟಾ” ಅಡಿಯಲ್ಲಿ ನಡೆಯುತ್ತಿರುವುದು ಗಮನಾರ್ಹವಾಗಿದೆ.
ವೇತನ ಶ್ರೇಣಿ :
- ಅಧಿಸೂಚನೆ ಪ್ರಕಾರ, ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ ₹18,000 ರಿಂದ ₹81,100 ವರೆಗೆ ವೇತನ ದೊರೆಯಲಿದೆ.
ಶೈಕ್ಷಣಿಕ ಅರ್ಹತೆ :
ಶೈಕ್ಷಣಿಕ ಅರ್ಹತೆ ಕುರಿತು ಹೇಳುವುದಾದರೆ,
- ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯದಿಂದ 10ನೇ ತರಗತಿ, 12ನೇ ತರಗತಿ ಅಥವಾ ಯಾವುದೇ ಪದವಿ ಪೂರ್ಣಗೊಳಿಸಿರುವ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ.
ಈ ಸುದ್ದಿಯನ್ನು ಓದಿ : ಆರ್ಟಿಒ ತಪಾಸಣೆಯಿಂದ ತಪ್ಪಿಸಿಕೊಳ್ಳಲು ಹೆದ್ದಾರಿಯಲ್ಲಿ ಇಟ್ಟಿಗೆ ಸುರಿದ ಡಂಪರ್ ಚಾಲಕ; ವಿಡಿಯೋ ವೈರಲ್.
Note : ಹುದ್ದೆಯ ಪ್ರಕಾರ ವಿದ್ಯಾರ್ಹತೆ ಬದಲಾಗುವ ಸಾಧ್ಯತೆ ಇರುವುದರಿಂದ ಅಧಿಕೃತ ಅಧಿಸೂಚನೆ ಪರಿಶೀಲಿಸುವುದು ಮುಖ್ಯ.
ವಯೋಮಿತಿ :
ಈ ಮೇಲ್ಕಾಣಿಸಿದ ಹುದ್ದೆಗಳಿಗೆ ಅರ್ಜಿ ಸಲ್ಲಿಸಲಿರುವ ಅಭ್ಯರ್ಥಿಗಳು,
- ಕನಿಷ್ಠ ವಯಸ್ಸು 18 ವರ್ಷ ಆಗಿರಬೇಕು.
- ಗರಿಷ್ಠ ವಯೋಮಿತಿ 27 ವರ್ಷ ಹೊಂದಿರಬೇಕು.
ವಯೋಮಿತಿ ಸಡಿಲಿಕೆ :
ಮೀಸಲಾತಿ ನಿಯಮಗಳ ಪ್ರಕಾರ ಕೆಲವು ವರ್ಗಗಳಿಗೆ ವಯೋಸಡಿಲಿಕೆ ನೀಡಲಾಗಿದ್ದು,
- ಒಬಿಸಿ ಅಭ್ಯರ್ಥಿಗಳಿಗೆ ಹೆಚ್ಚುವರಿಯಾಗಿ 5 ವರ್ಷ ಹಾಗೂ
- ಎಸ್ಸಿ/ಎಸ್ಟಿ ಅಭ್ಯರ್ಥಿಗಳಿಗೆ 10 ವರ್ಷ ವಯೋಮಿತಿ ಸಡಿಲಿಕೆ ಲಭ್ಯವಿದೆ.
ಅರ್ಜಿ ಸಲ್ಲಿಕೆ :
- ಈ ಹುದ್ದೆಗಳ ನೇಮಕಾತಿಗೆ ಆಫ್ಲೈನ್ ಮೂಲಕ ಅರ್ಜಿ ಸಲ್ಲಿಕೆ ಮಾಡಬೇಕಾಗುತ್ತದೆ.
ಇದನ್ನು ಓದಿ : SBIನಲ್ಲಿ 1,500 PO ಹುದ್ದೆಗಳ ನೇಮಕಾತಿ; ಉದ್ಯೋಗಾಕಾಂಕ್ಷಿಗಳು ಇಂದೇ ಅರ್ಜಿ ಸಲ್ಲಿಸಿ.
Note : ಅರ್ಜಿ ಪ್ರಕ್ರಿಯೆ ಈಗಾಗಲೇ ಆರಂಭವಾಗಿದೆ.
ಪ್ರಮುಖ ದಿನಾಂಕ :
- ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 05-ಜೂನ್-2026.
- ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 31-ಜುಲೈ -2026.
Note : ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮೊದಲು ಅಧಿಕೃತ ಅಧಿಸೂಚನೆ ಸಂಪೂರ್ಣವಾಗಿ ಓದಿ ಅಗತ್ಯ ದಾಖಲೆಗಳನ್ನು ಸಿದ್ಧಪಡಿಸಿಕೊಳ್ಳುವುದು ಸೂಕ್ತ.
ಪ್ರಮುಖ ಲಿಂಕ್ :
- ಅಧಿಕೃತ ವೆಬ್ಸೈಟ್ ಲಿಂಕ್ : ಇಲ್ಲಿ ಕ್ಲಿಕ್ ಮಾಡಿ
ಸರ್ಕಾರಿ ಉದ್ಯೋಗದ ಕನಸು ಕಾಣುತ್ತಿರುವ ಅಭ್ಯರ್ಥಿಗಳಿಗೆ ಇದು ಉತ್ತಮ ಅವಕಾಶವಾಗಿದ್ದು, ಅರ್ಹರು ಕೊನೆಯ ದಿನಾಂಕದೊಳಗೆ ಅರ್ಜಿ ಸಲ್ಲಿಸುವುದು ಉತ್ತಮ.
ಇತ್ತೀಚಿನ ಎಲ್ಲಾ ಪ್ರಮುಖ ಸುದ್ದಿಗಳನ್ನು ಇಲ್ಲಿ ಓದಿ







