ಕರ್ನಾಟಕ ಪಂಚಾಯತ್ ರಾಜ್ ಆಯುಕ್ತಾಲಯದಲ್ಲಿ ನೇಮಕಾತಿ.

ಕರ್ನಾಟಕ ಪಂಚಾಯತ್ ರಾಜ್ ಆಯುಕ್ತಾಲಯದಲ್ಲಿ ನೇಮಕಾತಿ

ಬೆಂಗಳೂರು: ಕರ್ನಾಟಕ ಪಂಚಾಯತ್ ರಾಜ್ ಆಯುಕ್ತಾಲಯದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗಾಗಿ ಅರ್ಜಿ ಸಲ್ಲಿಸಿ ಭವಿಷ್ಯ ರೂಪಿಸಿಕೊಳ್ಳಲು ಇದೊಂದು ಸುರ್ಣಾವಕಾಶ.

ಈ ನೇಮಕಾತಿಯಡಿ ವಿಷಯ ತಜ್ಞರು / Subject Experts ಹಾಗೂ ಯುವ ವೃತ್ತಿಪರರು / Young Professionals ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದ್ದು, ಆಯ್ಕೆಯಾದ ಅಭ್ಯರ್ಥಿಗಳಿಗೆ ಆಕರ್ಷಕ ವೇತನ ನೀಡಲಾಗುತ್ತದೆ. ಆಸಕ್ತರು ನಿಗದಿತ ಅವಧಿಯೊಳಗೆ ಅರ್ಜಿ ಸಲ್ಲಿಸಬಹುದು.

ಹುದ್ದೆಗಳ ವಿವರ :

ಇಲಾಖೆ: ಕರ್ನಾಟಕ ಪಂಚಾಯತ್ ರಾಜ್ ಆಯುಕ್ತಾಲಯ :

  • ಒಟ್ಟು ಹುದ್ದೆಗಳು: 03
  • ಹುದ್ದೆಗಳ ಹೆಸರು: ವಿಷಯ ತಜ್ಞರು, ಯುವ ವೃತ್ತಿಪರರು .
  • ಉದ್ಯೋಗ ಸ್ಥಳ: ಬೆಂಗಳೂರು.
  • ಅರ್ಜಿ ವಿಧಾನ: ಆನ್‌ಲೈನ್ / ಇ-ಮೇಲ್ ಮೂಲಕ.

ವೇತನ ಶ್ರೇಣಿ :

  • ಅಧಿಕೃತ ಅಧಿಸೂಚನೆಯ ಪ್ರಕಾರ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ ₹75,000 ರಿಂದ ₹1,00,000 ವರೆಗೆ ವೇತನ ನೀಡಲಾಗುತ್ತದೆ.

ಶೈಕ್ಷಣಿಕ ಅರ್ಹತೆ :

  • ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಶಿಕ್ಷಣ ಸಂಸ್ಥೆಯಿಂದ ಪದವಿ (Degree) ಪೂರ್ಣಗೊಳಿಸಿರಬೇಕು.

ಇದನ್ನು ಓದಿ : HAL ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ; ಜೂನ್‌ 03 ಕೊನೆಯ ದಿನ.!

Note : ಹುದ್ದೆಗೆ ಸಂಬಂಧಿಸಿದ ಅರ್ಹತೆಗಳ ಕುರಿತು ಹೆಚ್ಚಿನ ಮಾಹಿತಿಯನ್ನು ಅಧಿಕೃತ ಅಧಿಸೂಚನೆಯಲ್ಲಿ ಪರಿಶೀಲಿಸಬಹುದು.

ವಯೋಮಿತಿ :

  • ನೇಮಕಾತಿ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಗಳ ಗರಿಷ್ಠ ವಯಸ್ಸು 35 ವರ್ಷ ಮೀರಿರಬಾರದು.

ಆಯ್ಕೆ ಪ್ರಕ್ರಿಯೆ :

  • ಅಭ್ಯರ್ಥಿಗಳ ಶೈಕ್ಷಣಿಕ ಅರ್ಹತೆ, ಅನುಭವ ಹಾಗೂ ಇತರೆ ಮಾನದಂಡಗಳನ್ನು ಪರಿಗಣಿಸಿ ಆಯ್ಕೆ ಪ್ರಕ್ರಿಯೆ ನಡೆಸಲಾಗುತ್ತದೆ.
  • ಅಗತ್ಯವಿದ್ದಲ್ಲಿ ಸಂದರ್ಶನ (Interview) ಅಥವಾ ದಾಖಲೆ ಪರಿಶೀಲನೆ (Document Verification) ನಡೆಸುವ ಸಾಧ್ಯತೆಯಿದೆ.

ಅರ್ಜಿ ಸಲ್ಲಿಸುವ ವಿಳಾಸ :

ಅಭ್ಯರ್ಥಿಗಳು ತಮ್ಮ ಅರ್ಜಿಯನ್ನು ಕೆಳಗಿನ ವಿಳಾಸ ಅಥವಾ ಇ-ಮೇಲ್ ಮೂಲಕ ಕಳುಹಿಸಬಹುದು:

ಪಂಚಾಯತ್ ರಾಜ್ ಆಯುಕ್ತಾಲಯ
ಕಾಳಿದಾಸ ರಸ್ತೆ, ಗಾಂಧಿನಗರ, ಬೆಂಗಳೂರು.

ಇ-ಮೇಲ್: srlgrecruitment@gmail.com

ಅರ್ಜಿ ಸಲ್ಲಿಸುವ ವಿಧಾನ :

  • ಅಧಿಕೃತ ಅಧಿಸೂಚನೆಯನ್ನು ಡೌನ್‌ಲೋಡ್ ಮಾಡಿ ಓದಿಕೊಳ್ಳಿ.
  • ಅರ್ಜಿ ನಮೂನೆಯನ್ನು ಸರಿಯಾಗಿ ಭರ್ತಿ ಮಾಡಿ.
  • ಅಗತ್ಯ ದಾಖಲೆಗಳು, ಫೋಟೋ ಹಾಗೂ ಸಹಿಯನ್ನು ಲಗತ್ತಿಸಿ.
  • ಅರ್ಜಿಯನ್ನು ಪರಿಶೀಲಿಸಿ ನಿಗದಿತ ವಿಳಾಸ ಅಥವಾ ಇ-ಮೇಲ್‌ಗೆ ಕಳುಹಿಸಿ.
  • ಭವಿಷ್ಯದ ಉಲ್ಲೇಖಕ್ಕಾಗಿ ಅರ್ಜಿಯ ಪ್ರತಿಯನ್ನು ಉಳಿಸಿಕೊಳ್ಳಿ.

ಪ್ರಮುಖ ದಿನಾಂಕಗಳು :

  • ಅರ್ಜಿ ಸಲ್ಲಿಕೆಯ ಆರಂಭಿಕ ದಿನಂಕ : 30 ಮೇ 2026
  • ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 06 ಜೂನ್ 2026

ಅಭ್ಯರ್ಥಿಗಳಿಗೆ ಸೂಚನೆ :

ಅರ್ಜಿ ಸಲ್ಲಿಸುವ ಮೊದಲು ಅಧಿಕೃತ ಅಧಿಸೂಚನೆಯನ್ನು ಸಂಪೂರ್ಣವಾಗಿ ಓದುವುದು ಅಗತ್ಯ. ಅರ್ಜಿಯಲ್ಲಿ ತಪ್ಪು ಮಾಹಿತಿ ನೀಡಿದರೆ ಅಥವಾ ಅಗತ್ಯ ದಾಖಲೆಗಳನ್ನು ಸಲ್ಲಿಸದಿದ್ದರೆ ಅಭ್ಯರ್ಥಿತ್ವವನ್ನು ತಿರಸ್ಕರಿಸುವ ಸಾಧ್ಯತೆ ಇದೆ.

ಇತ್ತೀಚಿನ ಎಲ್ಲಾ ಪ್ರಮುಖ ಸುದ್ದಿಗಳನ್ನು ಇಲ್ಲಿ ಓದಿ


ಸೂಚನೆ: ಕರ್ನಾಟಕ ಪಂಚಾಯತ್ ರಾಜ್ ನೇಮಕಾತಿಗೆ ಸಂಬಂಧಿಸಿದ ನಿಯಮಗಳು, ಅರ್ಹತೆಗಳು ಹಾಗೂ ಇತರೆ ಮಾಹಿತಿಯಲ್ಲಿ ಬದಲಾವಣೆಗಳಿರುವ ಸಾಧ್ಯತೆ ಇರುವುದರಿಂದ ಅಭ್ಯರ್ಥಿಗಳು ಅಧಿಕೃತ ಅಧಿಸೂಚನೆಯನ್ನು ಪರಿಶೀಲಿಸಿ ನಂತರವೇ ಅರ್ಜಿ ಸಲ್ಲಿಸುವುದು ಒಳಿತು.

Leave a Comment

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Scroll to Top