ಹೈದರಾಬಾದ್: ತೆಲಂಗಾಣದ ರಂಗಾರೆಡ್ಡಿಯಲ್ಲಿ 6 ವರ್ಷದ ಮೊಮ್ಮಗಳಿಗೆ ಸಾರ್ವಜನಿಕ ರಸ್ತೆಯಲ್ಲಿ ಕಾರು ಚಾಲನೆ ಮಾಡಲು ಅವಕಾಶ ನೀಡಿದ ಪೊಲೀಸ್ ಸಬ್-ಇನ್ಸ್‌ಪೆಕ್ಟರ್ (ಪಿಎಸ್‌ಐ) ವಿರುದ್ಧ BNS ಹಾಗೂ ಮೋಟಾರು ವಾಹನ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ವಿಡಿಯೋ ವೈರಲ್ ಆದ ಬೆನ್ನಲೇ ಪಿಎಸ್‌ಐ ಅಮಾನತು ಮಾಡಿ ಡಿಜಿಪಿ ಆದೇಶ ಹೊರಡಿಸಿದ್ದಾರೆ.
ಸಂಚಾರ ನಿಯಮಗಳನ್ನು ಪಾಲಿಸುವಂತೆ ಸಾರ್ವಜನಿಕರಿಗೆ ಸಲಹೆ ನೀಡಬೇಕಾದ ಪೊಲೀಸ್ ಅಧಿಕಾರಿಯೊಬ್ಬರೇ ಕಾನೂನು ಉಲ್ಲಂಘಿಸಿದ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ.
ಸಾರ್ವಜನಿಕ ರಸ್ತೆಯಲ್ಲೇ ತನ್ನ 6 ವರ್ಷದ ಮೊಮ್ಮಗಳಿಗೆ ಕಾರು ಚಾಲನೆ ಮಾಡಲು ಅವಕಾಶ ನೀಡಿದ ಆರೋಪದ ಮೇಲೆ ಎಸ್‌ಐ ವಿರುದ್ಧ ಪ್ರಕರಣ ದಾಖಲಾಗಿದ್ದು, ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ಬಳಿಕ ವ್ಯಾಪಕ ಆಕ್ರೋಶ ವ್ಯಕ್ತವಾಗಿತ್ತು.
ಈ ಸುದ್ದಿ ಓದಿ : ಈ 6 ರಾಶಿಯವರಿಗೆ ಸುಳ್ಳು ಹೇಳೋದು ಅಸಾಧ್ಯ! ಮೋಸವನ್ನು ಕ್ಷಣದಲ್ಲೇ ಪತ್ತೆ ಹಚ್ಚುತ್ತಾರೆ.
ಲಭ್ಯವಾದ ಮಾಹಿತಿಯ ಪ್ರಕಾರ, ಸ್ಥಳೀಯ ರಸ್ತೆಯಲ್ಲಿ ವಾಹನಗಳ ಸಂಚಾರ ಹೆಚ್ಚಿರುವ ವೇಳೆ ಬಾಲಕಿ ಕಾರಿನ ಸ್ಟೀರಿಂಗ್ ಹಿಡಿದು ವಾಹನ ಚಲಾಯಿಸುತ್ತಿದ್ದಳು. ಈ ವೇಳೆ ಕಾರು ನಿಧಾನವಾಗಿ ಸಾಗುತ್ತಿತ್ತಾದರೂ ರಸ್ತೆಯಲ್ಲಿ ಸಂಚರಿಸುತ್ತಿದ್ದ ಇತರ ವಾಹನ ಸವಾರರಿಗೆ ತೊಂದರೆ ಉಂಟಾಗಿ ಕೆಲಕಾಲ ಟ್ರಾಫಿಕ್ ಜಾಮ್ ಕೂಡ ನಿರ್ಮಾಣವಾಗಿತ್ತು ಎಂದು ಹೇಳಲಾಗಿದೆ.
ಈ ದೃಶ್ಯವನ್ನು ಅಲ್ಲಿದ್ದ ಕೆಲವರು ಮೊಬೈಲ್‌ನಲ್ಲಿ ಸೆರೆಹಿಡಿದು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದು, ವಿಡಿಯೋ ವೈರಲ್ ಆದ ಬೆನ್ನಲ್ಲೇ ಪ್ರಕರಣ ಭಾರೀ ಚರ್ಚೆಗೆ ಗ್ರಾಸವಾಯಿತು.
ವೈರಲ್ ವಿಡಿಯೋದಲ್ಲೇನಿದೆ?
ವೈರಲ್ ವಿಡಿಯೊದಲ್ಲಿ, ಸಾರ್ವಜನಿಕರು ಈ ರೀತಿಯ ಮಾಡುವುದು ಅಪಾಯಕಾರಿ ನಡೆ ಎಂದು ಪ್ರಶ್ನಿಸಿದಾಗ, ಸಂಬಂಧಪಟ್ಟ ಸಬ್-ಇನ್ಸ್‌ಪೆಕ್ಟರ್ ಪೂಜಾರಿ ತಿರುಪತಿ ಉದ್ಧಟತನದಿಂದ ಪ್ರತಿಕ್ರಿಯಿಸಿರುವುದು ಕಾಣಿಸುತ್ತದೆ. “ಇದು ನನ್ನ ವೈಯಕ್ತಿಕ ನಿರ್ಧಾರ. ನನ್ನನ್ನು ಪ್ರಶ್ನಿಸಲು ನೀವ್ಯಾರು?” ಎಂದು ಅವರು ಸಾರ್ವಜನಿಕರ ಮೇಲೆಯೇ ಸಿಟ್ಟುಗೊಂಡಿರುವುದು ವಿಡಿಯೊದಲ್ಲಿ ದಾಖಲಾಗಿದೆ ಎನ್ನಲಾಗಿದೆ.
Cyberabad Police Registered a Case against the Sub-Inspector of Police, for Permitting his 6½-year-old granddaughter to drive his Car on the Gandhamguda-Bairagiguda Road.
In this connection, a case has been registered by Narsingi Police, under… pic.twitter.com/kxxgcDnNxb
— Surya Reddy (@jsuryareddy) July 12, 2026
Courtesy : Social Media / Twitter
ಈ ಘಟನೆ ಕುರಿತಂತೆ ಸಾಮಾಜಿಕ ಜಾಲತಾಣಗಳಲ್ಲಿ ನೆಟ್ಟಿಗರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಾನೂನನ್ನು ಜಾರಿಗೊಳಿಸಬೇಕಾದ ಪೊಲೀಸ್ ಅಧಿಕಾರಿಯೇ ಸಂಚಾರಿ ನಿಯಮಗಳನ್ನು ಉಲ್ಲಂಘಿಸಿರುವುದು ಸರಿಯಲ್ಲ ಎಂದು ಹಲವರು ಅಭಿಪ್ರಾಯಪಟ್ಟಿದ್ದಾರೆ.
ಇದನ್ನು ಓದಿ : 560 ಭೂಮಾಪಕರ ಹುದ್ದೆಗಳಿಗೆ ಅರ್ಜಿ ಆಹ್ವಾನ; ₹76,100 ವೇತನ, ಇಂದಿನಿಂದ ಅರ್ಜಿ ಸಲ್ಲಿಕೆ ಆರಂಭ.!
ಅಪ್ರಾಪ್ತ ಬಾಲಕಿಗೆ ಸಾರ್ವಜನಿಕ ರಸ್ತೆಯಲ್ಲಿ ವಾಹನ ಚಾಲನೆ ಮಾಡಲು ಅವಕಾಶ ನೀಡುವುದು ಆಕೆಯ ಜೀವಕ್ಕೆ ಮಾತ್ರವಲ್ಲ, ರಸ್ತೆಯಲ್ಲಿ ಸಂಚರಿಸುವ ಇತರ ವಾಹನ ಸವಾರರು ಹಾಗೂ ಪಾದಚಾರಿಗಳ ಸುರಕ್ಷತೆಗೂ ಗಂಭೀರ ಅಪಾಯವನ್ನುಂಟು ಮಾಡಬಹುದು ಎಂದು ಸಾರ್ವಜನಿಕರು ಕಳವಳ ವ್ಯಕ್ತಪಡಿಸಿದ್ದಾರೆ.
ವಿಡಿಯೋ ವೈರಲ್ ಆದ ನಂತರ ಎಚ್ಚೆತ್ತ ನರಸಿಂಗಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಆರೋಪಿ ಸಬ್-ಇನ್ಸ್‌ಪೆಕ್ಟರ್ ವಿರುದ್ಧ ಭಾರತೀಯ ನ್ಯಾಯ ಸಂಹಿತೆ (BNS) ಸೆಕ್ಷನ್ 125ರ ಅಡಿಯಲ್ಲಿ ಜೀವಕ್ಕೆ ಅಪಾಯ ಉಂಟುಮಾಡುವ ಆರೋಪದ ಜೊತೆಗೆ ಮೋಟಾರು ವಾಹನ ಕಾಯ್ದೆಯ ಸೆಕ್ಷನ್ 180 ಮತ್ತು 184ರ ಅಡಿಯಲ್ಲಿ ಕಾನೂನು ಕ್ರಮ ಜರುಗಿಸಲಾಗಿದೆ.
ಪ್ರಾಥಮಿಕ ತನಿಖೆ ವೇಳೆ ಸಬ್-ಇನ್ಸ್‌ಪೆಕ್ಟರ್ ತಮ್ಮ ಸ್ಪಷ್ಟೀಕರಣದಲ್ಲಿ, “ಇದು ಆಟೋಮ್ಯಾಟಿಕ್ ಕಾರ್ ಆಗಿದ್ದರಿಂದ ವಾಹನದ ನಿಯಂತ್ರಣ ನನ್ನ ಕೈಯಲ್ಲೇ ಇತ್ತು. ಮೊಮ್ಮಗಳಿಗೆ ಗಿನ್ನೆಸ್ ದಾಖಲೆಗಾಗಿ ತರಬೇತಿ ನೀಡುತ್ತಿದ್ದೆ” ಎಂದು ಹೇಳಿಕೆ ನೀಡಿರುವುದಾಗಿ ವರದಿಯಾಗಿದೆ.
ಈ ಸುದ್ದಿಯನ್ನು ಓದಿ : ರೈಲು ಡಿಕ್ಕಿಯಾಗುವ ಕ್ಷಣದಲ್ಲೇ ಜೀವ ಉಳಿಸಿದ ಗೇಟ್‌ಕೀಪರ್; ರೋಚಕ ವಿಡಿಯೋ ವೈರಲ್!
ಆದರೆ ಈ ಕಾರಣವನ್ನು ಅಧಿಕಾರಿಗಳು ಗಂಭೀರವಾಗಿ ಪರಿಗಣಿಸಿದ್ದು, ಸಾರ್ವಜನಿಕ ರಸ್ತೆಯಲ್ಲಿ ಇಂತಹ ಪ್ರಯೋಗಗಳಿಗೆ ಅವಕಾಶವಿಲ್ಲ ಎಂಬ ಅಭಿಪ್ರಾಯ ವ್ಯಕ್ತವಾಗಿದೆ.
ಪಿಎಸ್‌ಐ ಅಮಾನತು :
ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ತೆಲಂಗಾಣ ಪೊಲೀಸ್ ಮಹಾನಿರ್ದೇಶಕ (DGP) ಸಿ.ವಿ. ಆನಂದ್ ಅವರು, ಸಂಬಂಧಪಟ್ಟ ಸಬ್-ಇನ್ಸ್‌ಪೆಕ್ಟರ್‌ನನ್ನು ತಕ್ಷಣದಿಂದಲೇ ಅಮಾನತುಗೊಳಿಸುವಂತೆ ಹಾಗೂ ಇಲಾಖಾ ಮಟ್ಟದಲ್ಲಿ ಸಂಪೂರ್ಣ ತನಿಖೆ ನಡೆಸುವಂತೆ ಸೈಬರಾಬಾದ್ ಪೊಲೀಸ್ ಕಮಿಷನರ್ ಎಂ. ರಮೇಶ್ ಅವರಿಗೆ ನಿರ್ದೇಶನ ನೀಡಿದ್ದಾರೆ.
ಸದ್ಯ ಪ್ರಕರಣದ ತನಿಖೆ ಮುಂದುವರಿದಿದ್ದು, ತನಿಖೆಯ ವರದಿಯ ಆಧಾರದ ಮೇಲೆ ಮುಂದಿನ ಕಾನೂನು ಹಾಗೂ ಇಲಾಖಾ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿದುಬಂದಿದೆ.
ಈ ಘಟನೆ ಸಾರ್ವಜನಿಕ ರಸ್ತೆಯಲ್ಲಿ ಸಂಚಾರಿ ನಿಯಮಗಳ ಪಾಲನೆ ಎಷ್ಟು ಮುಖ್ಯ ಎಂಬುದನ್ನು ಮತ್ತೊಮ್ಮೆ ನೆನಪಿಸಿದೆ. ಅಪ್ರಾಪ್ತ ವಯಸ್ಸಿನ ಮಕ್ಕಳಿಗೆ ಸಾರ್ವಜನಿಕ ರಸ್ತೆಯಲ್ಲಿ ವಾಹನ ಚಾಲನೆ ಮಾಡಲು ಅವಕಾಶ ನೀಡುವುದು ಕಾನೂನುಬಾಹಿರವಾಗಿದ್ದು, ಇಂತಹ ನಿರ್ಲಕ್ಷ್ಯವು ದೊಡ್ಡ ಅನಾಹುತಗಳಿಗೆ ಕಾರಣವಾಗುವ ಸಾಧ್ಯತೆ ಇರುವುದರಿಂದ ಎಲ್ಲರೂ ಸಂಚಾರ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವುದು ಅಗತ್ಯವಾಗಿದೆ.
ಇತ್ತೀಚಿನ ಎಲ್ಲಾ ಪ್ರಮುಖ ಸುದ್ದಿಗಳನ್ನು ಇಲ್ಲಿ ಓದಿ
Disclaimer: ಈ ಲೇಖನವು ಸಾರ್ವಜನಿಕ ವಲಯದಲ್ಲಿ ಲಭ್ಯವಿರುವ ವರದಿಗಳು ಮತ್ತು ಅಧಿಕೃತ ಮಾಹಿತಿಯನ್ನು ಆಧರಿಸಿ ಸಿದ್ಧಪಡಿಸಲಾಗಿದೆ. ಪ್ರಕರಣದ ತನಿಖೆ ಮುಂದುವರಿದಿರುವುದರಿಂದ ಮುಂದಿನ ತನಿಖೆಯಲ್ಲಿ ಹೊಸ ಮಾಹಿತಿ ಹೊರಬರುವ ಸಾಧ್ಯತೆ ಇದೆ.







